

ದಾವಣಗೆರೆ : ಮತಗಳ್ಳತನ ಹಾಗೂ ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮಗಳ ವಿರುದ್ಧ ನವದೆಹಲಿಯ ಸಂಸತ್ ಭವನದ ಆವರಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸಿದ್ದರು.
ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ ಇಂಡಿಯಾ ಒಕ್ಕೂಟದ ಸಂಸದರು ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಪಾಲ್ಗೊಂಡಿದ್ದರು.
ಈ ಪ್ರತಿಭಟನಾಕಾರರು, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ನಡೆಯುತ್ತಿರುವ ಚುನಾವಣಾ ಅಕ್ರಮ, ನಕಲಿ ಮತದಾರರ ಸೇರ್ಪಡೆ ಹಾಗೂ ನ್ಯಾಯಸಮ್ಮತ ಚುನಾವಣಾ ಪ್ರಕ್ರಿಯೆಯನ್ನು ಹಾಳು ಮಾಡುವ ಪ್ರಯತ್ನಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಚುನಾವಣೆ ಅಕ್ರಮಗಳನ್ನು ತಡೆದು ಪ್ರಜಾಪ್ರಭುತ್ವವನ್ನು ಕಾಪಾಡುವ ಹೋರಾಟ ಮುಂದುವರಿಯಲಿದೆ ಎಂದು ಇಂಡಿಯಾ ಒಕ್ಕೂಟದ ಸಂಸದರು ಘೋಷಿಸಿದರು.