

ದಾವಣಗೆರೆ : ಜಿಲ್ಲಾ ಕಾಂಗ್ರೆಸ್ ವತಿಯಿಂದ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ಧ್ವಜಾರೋಹಣ ನೇರವೇರಿಸಿ ಮಾತನಾಡಿ, ಮಹಾತ್ಮ ಗಾಂಧೀಜಿ, ಪಂಡಿತ್ ಜವಾಹರ ಲಾಲ್ ನೆಹರು ಮುಂತಾದವರ ಹೋರಾಟದ ಫಲವಾಗಿ 1947ರಲ್ಲಿ ನಮಗೆ ಸ್ವಾತಂತ್ರ್ಯ ದೊರೆಯಿತು ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ.ಶೆಟ್ಟಿ, ಎಸ್.ಮಲ್ಲಿಕಾರ್ಜುನ್, ಮುದೇಗೌಡ್ರು ಗಿರೀಶ್, ಎಸ್.ಎಲ್. ಆನಂದಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಶಿವಕುಮಾರ್, ಅಯೂಬ್ ಪೈಲ್ವಾನ್, ಜಿ.ಸಿ.ನಿಂಗಪ್ಪ, ಸೇವಾದಳದ ಡೋಲಿ ಚಂದ್ರು, ಮಹಾನಗರ ಪಾಲಿಕೆ ಸದಸ್ಯ ಎ.ನಾಗರಾಜ್, ರಾಘವೇಂದ್ರ ನಾಯ್ಕ, ಮಹಿಳಾ ಕಾಂಗ್ರೆಸ್‌ನ ಅನಿತಾಬಾಯಿ ಜಾಧವ್, ಮಂಜಮ್ಮ, ಕವಿತಾ ಚಂದ್ರಶೇಖರ್, ರಾಮಚಂದ್ರಪ್ಪ ಇದ್ದರು.