ಕಾರ್ಯಕರ್ತರೇ ಪಕ್ಷದ ಆಸ್ತಿ

dvg-ward-meeting-08.jpg
Published on

ದಾವಣಗೆರೆ : ಕಾರ್ಯಕರ್ತರೇ ಪಕ್ಷದ ಆಸ್ತಿಯಾಗಿದ್ದು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಡಾ. ಪ್ರಭಾ ಮಲ್ಲಿಕಾರ್ಜುನ್ ಸಲಹೆ ನೀಡಿದರು.
 ತಮ್ಮ ಗೃಹ ಕಚೇರಿಯಲ್ಲಿ ಗುರುವಾರ, ಮಹಾನಗರ ಪಾಲಿಕೆಯ ಒಂದನೇ ವಾರ್ಡಿನಿಂದ ಐದನೇ ವಾರ್ಡಿನ ಪಕ್ಷದ ಸದಸ್ಯರು, ವಾರ್ಡ್ ಅಧ್ಯಕ್ಷರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದರು.
 ಡಾ. ಶಾಮನೂರು ಶಿವಶಂಕರಪ್ಪ ಅವರ ಗೆಲುವಿಗೆ ಪಕ್ಷದ ವಾರ್ಡ್ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಿದ್ದಾರೆ. ಮುಂದಿನ ಚುನಾವಣೆಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮತದಾನವಾಗುವಂತೆ ಮತದಾರರನ್ನು ಪ್ರೇರೇಪಿಸಬೇಕು ಎಂದರು.
 ಬೂತ್ ಮಟ್ಟದಲ್ಲಿ ಪಕ್ಷದ ಮತಗಳ ಬಗ್ಗೆ ಚರ್ಚೆ ನಡೆಸಿದರು. ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ನೀಡಿದ್ದ ಭರವಸೆಗಳನ್ನು ಶಾಸಕರು ಈಡೇರಿಸುವರು ಎಂದು ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ವಿಶ್ವಾಸ ತುಂಬಿದರು.
 ಪಾಲಿಕೆ ಸದಸ್ಯ ಕಬೀರ್ ಖಾನ್, ಮುಖಂಡರಾದ ಕೊಡಪಾನ ದಾದಾಪೀರ್, ಪ್ರವೀಣ್ ಕುಮಾರ್, ಹರೀಶ್ ಬಸಾಪುರ, ಗೀತಾ ಚಂದ್ರಶೇಖರ್, ಎಲ್.ಎಂ.ಸಾಗರ್, ಮೋಹನ್, ಬಾಬಾ ಜಾನ್, ಮಂಗಳಮ್ಮ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net