ಸಿಎಂ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ

dvg-KSMCA.jpg
Published on

ದಾವಣಗೆರೆ : ರಾಜ್ಯ ಸರ್ಕಾರದ ಏಕೈಕ ಜಾಹೀರಾತು ಸಂಸ್ಥೆಯಾದ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಆ್ಯಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಕಂಪನಿಯ ಅಧ್ಯಕ್ಷ ಸತೀಶ್ ಕೃಷ್ಣ ಸೈಲ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಂಸ್ಥೆಯ ಆರ್ಥಿಕ ವರ್ಷ 2023-24ರ ಲಾಭಾಂಶದಿಂದ 1 ಕೋಟಿ ರೂ. ದೇಣಿಗೆಯ ಚೆಕ್‌ನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರ ಸಮ್ಮುಖದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು.  ಇದು ಸಂಸ್ಥೆಯ ಸಾಮಾಜಿಕ ಕಳಕಳಿಯ ದ್ಯೋತಕವಾಗಿದೆ. ಕೆಎಸ್‌ಎಂಸಿಎ ಸಂಸ್ಥೆಯು ಆರ್ಥಿಕ ವರ್ಷ 2023-24ರ ಸಾಲಿನಲ್ಲಿ 5.29 ಕೋಟಿ ರೂ. ಮೊತ್ತದ ಲಾಭಾಂಶವನ್ನು ಘೋಷಿಸಿದೆ.  ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕೆಎಸ್‌ಎಂಸಿಎ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಅತೀಕುಲ್ಲಾ ಶರೀಫ್ ಮತ್ತು ಉಪ ಪ್ರಧಾನ ವ್ಯವಸ್ಥಾಪಕ ಪಿ.ಎಸ್. ನಂದೀಶ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net