ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

Crime_20250312231759795.jpg
Published on

ದಾವಣಗೆರೆ : ಹಳೆಯ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಹಾಡ ಹಗಲೇ ಬರ್ಬರವಾಗಿ ಕೊಲೆ ಮಾಡಿದ ಅಪರಾಧಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.  ಮೊಹಮ್ಮದ್ ಸಲೀಂ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತನು 2022 ರ ಜೂನ್ 21 ರಂದು ಮಹ್ಮದ್ ಜಾಕೀರ್ ಎಂಬ ಬಸ್ ಏಜೆಂಟ್ನನ್ನು ಚನ್ನಗಿರಿಯ ಕೈಮರದ ಸರ್ಕಲ್ ಬಳಿ ಚಾಕುವಿನಿಂದ ಹಲವು ಬಾರಿ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಎಂದು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.  ತನಿಖೆ ನಡೆಸಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಪಿ.ಬಿ. ಮಧು ನ್ಯಾಯಾಲಯಕ್ಕೆ ದೋಷರೋಪ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಎಂ.ಎಚ್. ಅಣ್ಣಯ್ಯನವರ್ ಮಂಗಳವಾರ ತೀರ್ಪು ನೀಡಿದರು. ಫಿರ್ಯಾದಿಯ ಪರವಾಗಿ ಸರ್ಕಾರಿ ವಕೀಲ ಕೆ.ಎಸ್. ಸತೀಶ್ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net