ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ, ಅಪರಾಧಿಗೆ 21 ವರ್ಷ ಕಾರಾಗೃಹ ಶಿಕ್ಷೆ

Crime_20250618234849871.jpg
Published on

ದಾವಣಗೆರೆ : ಬಾಲಕಿಯನ್ನು ಪುಸಲಾಯಿಸಿ ಒತ್ತಾಯದಿಂದ ಕರೆದುಕೊಂಡು ಹೋಗಿ ಮದುವೆಯಾಗಿ, ಅತ್ಯಾಚಾರ ಎಸಗಿದ ಅಪರಾಧಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಎಫ್.ಟಿ.ಎಸ್.ಸಿ-1 ನ್ಯಾಯಾಲಯ 21 ವರ್ಷ ಕಾರಾಗೃಹ ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿದೆ.  ಹರಿಹರದ ನಿವಾಸಿ ಸಚಿನ್ ಶಿಕ್ಷೆಗೆ ಗುರಿಯಾದ ಅಪರಾಧಿ. 2022ರ ಡಿ. 21ರಂದು 9ನೇ ತರಗತಿಯ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಒತ್ತಾಯದಿಂದ ದಾವಣಗೆರೆಯಿಂದ ಚಿಕ್ಕಮಗಳೂರು ಜಿಲ್ಲೆಯ ಗ್ರಾಮವೊಂದಕ್ಕೆ ಆತ ಕರೆದುಕೊಂಡು ಹೋಗಿದ್ದ. ಬಳಿಕ ನಿನ್ನನ್ನು ಮದುವೆಯಾಗಿದ್ದೇನೆ ಎಂದು ಹೇಳಿ ಅಲ್ಲಿನ ಮನೆಯೊಂದರಲ್ಲಿ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಬಾಲಕಿಯ ಪಾಲಕರು ನೀಡಿದ ದೂರು ಆಧರಿಸಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  ತನಿಖಾಧಿಕಾರಿ ಮಲ್ಲೇಶ್ ದೊಡ್ಡಮನಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ ಅವರು ತೀರ್ಪು ನೀಡಿದರು. ಸರ್ಕಾರಿ ವಕೀಲೆ ಸುನಂದಾ ಮಡಿವಾಳರ್ ವಾದ ಮಂಡಿಸಿದ್ದರು.    

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net