ದಾವಣಗೆರೆಯಲ್ಲಿ ಕರೊನಾಕ್ಕೆ ಮತ್ತೊಂದು ಬಲಿ

corona (2)
Published on

ದಾವಣಗೆರೆ: ಜಿಲ್ಲೆಯಲ್ಲಿ ಕರೊನಾ ಸೋಂಕಿನಿಂದ 73 ವರ್ಷದ ವೃದ್ಧರೊಬ್ಬರು ಬಲಿಯಾಗಿದ್ದು, ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 14ಕ್ಕೇರಿದೆ.

ನಗರದ ಎಂಸಿಸಿ ಎ ಬ್ಲಾಕ್‌ನ ನಿವಾಸಿಯಾಗಿದ್ದ ವೃದ್ಧ ಸಕ್ಕರೆ ಕಾಯಿಲೆ, ರಕ್ತದೊತ್ತಡ, ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಉಸಿರಾಟ ತೊಂದರೆಯಿಂದ ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ತಪಾಸಣೆಗೆ ಒಳಪಡಿಸಿದಾಗ ಕರೊನಾ ಪಾಸಿಟಿವ್ ಬಂದಿತ್ತು, ಬುಧವಾರ ಮೃತಪಟ್ಟರು ಎಂದು ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net