ಪಾಲಿಕೆಯ 3 ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಆಯ್ಕೆ

Corporation-PALIKE-DVG.jpg
Published on

ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆಯ 3 ಸ್ಥಾಯಿ ಸಮಿತಿಗಳಿಗೆ ಸೋಮವಾರ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.
 ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮಾಜಿ ಉಪ ಮೇಯರ್ ಅಬ್ದುಲ್ ಲತೀಫ್, ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎಚ್. ಉದಯಕುಮಾರ್ ಹಾಗೂ ಸಾರ್ವಜನಿಕ ಆರೋಗ್ಯ, ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮೀನಾಕ್ಷಿ ಜಗದೀಶ್ ಆಯ್ಕೆಯಾದರು.
 ಲೆಕ್ಕಪತ್ರ ಸ್ಥಾಯಿ ಸಮಿತಿಯ ಅಧ್ಯಕ್ಷರ ಆಯ್ಕೆಯನ್ನು ಸದಸ್ಯರೊಬ್ಬರ ಗೈರು ಹಾಜರಿ ಹಿನ್ನೆಲೆಯಲ್ಲಿ ಮುಂದೂಡಲಾಯಿತು ಎಂದು ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net