ಫ್ರೆಂಡ್ಸ್ ಬೆಂಗಳೂರು ತಂಡಕ್ಕೆ ಪ್ರಶಸ್ತಿ

dvg-friends-Bangalore-team-04.jpg
Published on

ದಾವಣಗೆರೆ : ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸ್ಮರಣೆಯಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಹಬ್ಬಕ್ಕೆ ಸೋಮವಾರ ಬೆಳಗಿನ ಜಾವ ತೆರೆ ಬಿದ್ದಿದ್ದು ಫ್ರೆಂಡ್ಸ್ ಬೆಂಗಳೂರು ತಂಡ ಪ್ರಶಸ್ತಿ ಗಳಿಸಿತು.
 ಫೈನಲ್ ಪಂದ್ಯದಲ್ಲಿ ಫ್ರೆಂಡ್ಸ್ ಬೆಂಗಳೂರು ತಂಡ ಗೆಲುವು ಸಾಧಿಸಿ 5 ಲಕ್ಷ ರೂ. ನಗದು ಮತ್ತು ಟ್ರೋಫಿಯನ್ನು ಪಡೆಯಿತು. ರನ್ನರ್ ಅಪ್ ಉಡುಪಿಯ ಇಜಾನ್ ಸ್ಪೋರ್ಟ್ಸ್ ತಂಡವು 3.55 ಲಕ್ಷ ರೂ. ನಗದು ಹಾಗೂ ಆಕರ್ಷಕ ಟ್ರೋಫಿಯನ್ನು ಗಳಿಸಿತು.
 ಟಾಸ್ ಗೆದ್ದು ಫೀಲ್ಡಿಂಗ್‌ಗೆ ಇಳಿದ ಫ್ರೆಂಡ್ಸ್ ಬೆಂಗಳೂರು ಆಟಗಾರರು, ನಾಲ್ಕು ವಿಕೆಟ್ ಪಡೆದು ಎದುರಾಳಿಯನ್ನು 48 ರನ್‌ಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು. ಸವಾಲು ಬೆನ್ನಟ್ಟಿದ ಫ್ರೆಂಡ್ಸ್ ಬೆಂಗಳೂರು ತಂಡ ಆರಂಭದಲ್ಲಿ ಉತ್ತಮ ಆಟಗಾರರ ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿದರೂ, ನಂತರ ಚೇತರಿಸಿಕೊಂಡು 7 ವಿಕೆಟ್ ನಷ್ಟಕ್ಕೆ 51 ರನ್ ಗಳಿಸಿ ಗೆಲುವು ಸಾಧಿಸಿತು.
 ಈ ಪಂದ್ಯವನ್ನು 25 ಸಾವಿರಕ್ಕೂ ಹೆಚ್ಚು ಕ್ರೀಡಾಭಿಮಾನಿಗಳು ವೀಕ್ಷಿಸಿದರು. ಬಹುಮಾನ ವಿತರಣೆ ಸಮಾರಂಭದಲ್ಲಿ ಆಯೋಜಕರಾದ ಶಿವಗಂಗಾ ಶ್ರೀನಿವಾಸ್, ರಾಜು ರೆಡ್ಡಿ, ಕುರುಡಿ ಗಿರೀಶ್, ಜಯಪ್ರಕಾಶ್ ಗೌಡ, ನಿಖಿಲ್ ಶೆಟ್ಟಿ, ಮಹಾನಗರ ಪಾಲಿಕೆ ಸದಸ್ಯ ಜೆ.ಎನ್. ಶ್ರೀನಿವಾಸ್ ಸೇರಿ ಕ್ರೀಡಾಭಿಮಾನಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net