

ದಾವಣಗೆರೆ : ಸಮೀಪದ ಹುಣಸೇಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ನಿಂತಿದ್ದ ಕಾರಿಗೆ ಬೊಲೆರೋ ವಾಹನ ಡಿಕ್ಕಿಯಾಗಿ ಆಟೋ ಚಾಲಕನೊಬ್ಬ ಮೃತಪಟ್ಟಿದ್ದಾನೆ. ದಾವಣಗೆರೆಯ ತಿಪ್ಪೇಸ್ವಾಮಿ (45) ಮೃತ ವ್ಯಕ್ತಿ. ಬೆಂಗಳೂರಿನಿಂದ ಬರುತ್ತಿದ್ದ ಕಾರೊಂದರ ಟೈರ್ ಬರ್ಸ್ಟ್ ಆಗಿದ್ದರಿಂದ ಕಾರನ್ನು ರಸ್ತೆ ಬದಿ ನಿಲ್ಲಿಸಿದ್ದರು. ಅದೇ ಮಾರ್ಗವಾಗಿ ಬರುತ್ತಿದ್ದ ಆಟೋ ಚಾಲಕ ತಿಪ್ಪೇಸ್ವಾಮಿಯನ್ನು ಸಹಾಯ ಮಾಡುವಂತೆ ಕೇಳಿದ್ದಾರೆ. ಅದಕ್ಕೆ ಒಪ್ಪಿದ ತಿಪ್ಪೇಸ್ವಾಮಿ, ಕಾರಿನ ಟೈರ್ ಬದಲಾಯಿಸುತ್ತಿದ್ದಾಗ, ಬೊಲೇರೋ ವಾಹನವೊಂದು ಆ ಕಾರಿಗೆ ಡಿಕ್ಕಿ ಹೊಡೆದಿದ್ದರಿಂದ ತಿಪ್ಪೇಸ್ವಾಮಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟರು. ಕಾರಿನಲ್ಲಿ ಬಂದವರಿಗೆ ಯಾವುದೇ ತೊಂದರೆಯಾಗಿಲ್ಲ. ಸಹಾಯ ಮಾಡಲು ಹೋಗಿದ್ದ ವ್ಯಕ್ತಿ ಅಪಘಾತದಲ್ಲಿ ಸಾವಿಗೀಡಾಗಿದ್ದು ದುರದೃಷ್ಟಕರ ಎಂಬ ಮಾತು ಕೇಳಿಬಂದಿದೆ. ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ...