29 ರಂದು ಭದ್ರಾ ನೀರಾವರಿ ಸಲಹಾ ಸಮಿತಿ ಸಭೆ

dam_20240727000356835.jpg
Published on

ದಾವಣಗೆರೆ : ಭದ್ರಾ ಯೋಜನೆಯ ನೀರಾವರಿ ಸಲಹಾ ಸಮಿತಿಯ 85ನೇ ಸಭೆ ಜುಲೈ 29 ರಂದು ಶಿವಮೊಗ್ಗ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ.  ಅಂದು ಬೆಳಗ್ಗೆ 11 ಗಂಟೆಗೆ ಆರಂಭವಾಗುವ ಸಭೆಯ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷರೂ ಆದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ವಹಿಸುವರು. 2024-25ನೇ ಸಾಲಿನ ಮುಂಗಾರು ಬೆಳೆಗೆ ನೀರು ಹರಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಇಂಜಿನಿಯರ್ ಹೊರಡಿಸಿರುವ ಸೂಚನಾ ಪತ್ರದಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net