ಸಹಸ್ರ ಮಹಾಕಾರ್ತಿಕ ದೀಪೋತ್ಸವ

dvg-maha-kartika-deepotsava.jpg
Published on

ದಾವಣಗೆರೆ :  ಜಿಲ್ಲೆಯ ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಎಳ್ಳು ಅಮಾವಾಸ್ಯೆಯ ಕಡೇ ಕಾರ್ತಿಕೋತ್ಸವದ ಅಂಗವಾಗಿ ಸಹಸ್ರ ದೀಪೋತ್ಸವ ಕಾರ್ಯಕ್ರಮ ಸೋಮವಾರ ನಡೆಯಲಿದೆ.  ಬೆಳಗ್ಗೆ 6 ಗಂಟೆಯಿಂದ ಸ್ವಾಮಿಗೆ ರುದ್ರಾಭಿಷೇಕ, ಅಷ್ಟೋತ್ತರ, ಮಹಾ ಮಂಗಳಾರತಿ ಹಾಗೂ ಸಂಜೆ 6 ಗಂಟೆಗೆ ಮರವಂಜಿ ಗ್ರಾಮದಲ್ಲಿ ವೀರಗಾಸೆ ಕುಣಿತದೊಂದಿಗೆ ಸ್ವಾಮಿಯ ಹೂವಿನ ಪಲ್ಲಕ್ಕಿ ಉತ್ಸವ ಹಾಗೂ ಸಹಸ್ರ ದೀಪೋತ್ಸವ ಮತ್ತು ಮಠದಲ್ಲಿ ಪ್ರಸಾದ ವಿನಿಯೋಗವಿರುತ್ತದೆ.  ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಮರವಂಜಿ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net