ಜಾತಿರಹಿತ ಸಮಾಜದ ಹರಿಕಾರ ಬಸವಣ್ಣ

DVG-JILLADALITHA-10.jpg
Published on

ದಾವಣಗೆರೆ : ವಿಶ್ವಗುರು, ಸಾಂಸ್ಕೃತಿಕ ನಾಯಕ ಬಸವಣ್ಣನವರು ವರ್ಗ ಮತ್ತು ಜಾತಿ ರಹಿತ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸುವ ಮೂಲಕ ಬದಲಾವಣೆಯ ಹರಿಕಾರರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಹೇಳಿದರು.
 ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಶ್ರೀ ಬಸವೇಶ್ವರ, ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
 ಬಸವೇಶ್ವರರು 12 ನೇ ಶತಮಾನದಲ್ಲಿ ತಮ್ಮ ಸರಳ ವಚನಗಳ ಮೂಲಕ ಸಮಾಜದಲ್ಲಿದ್ದ ಮೌಢ್ಯತೆ ನಿವಾರಿಸುವ ಕೆಲಸ ಮಾಡಿದರಲ್ಲದೆ, ಕನ್ನಡ ಸಾಹಿತ್ಯಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಆಗಿನ ಕಾಲದಲ್ಲೇ ಅನುಭವ ಮಂಟಪ ಸ್ಥಾಪಿಸಿ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಕಲ್ಪನೆ ಕಟ್ಟಿಕೊಟ್ಟಿದ್ದರು ಎಂದು ಸ್ಮರಿಸಿದರು.
 ಹೇಮರೆಡ್ಡಿ ಮಲ್ಲಮ್ಮ ಶಿವನ ಭಕ್ತೆಯಾಗಿ ಬಸವಣ್ಣನವರ ಮಾರ್ಗ ಅನುಸರಿಸಿದರು. ಮಹಾ ಸಾಧ್ವಿಯಾಗಿದ್ದ ಮಲ್ಲಮ್ಮನವರ ಜೀವನ ಎಲ್ಲರಿಗೂ ಸ್ಫೂರ್ತಿ ಎಂದು ತಿಳಿಸಿದರು.
 ಜಿಪಂ ಸಿಇಒ ಸುರೇಶ್ ಬಿ.ಇಟ್ನಾಳ್, ಎಎಸ್‌ಪಿ ವಿಜಯಕುಮಾರ್ ಎಂ. ಸಂತೋಷ್, ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ, ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ರುದ್ರಮುನಿ, ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ, ಹೇಮರೆಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷ ಡಾ.ಕೊಟ್ರೇಶ್ ಬಿದ್ರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳನಾಯ್ಕ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net