ವಿಧಾನಸಭಾ ಚುನಾವಣೆ ವೇಳೆ ಇಲ್ಲದ ಆಕ್ಷೇಪ ಈಗೇಕೆ?

Prabha-Mallikarjun-11.jpg
Published on

ದಾವಣಗೆರೆ : ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ 5 ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಜನರ ಮುಂದಿಟ್ಟಾಗ ಏನೂ ಹೇಳದವರು, ಕಾಂಗ್ರೆಸ್‌ನ ಲೋಕಸಭಾ ಚುನಾವಣಾ ಪ್ರಣಾಳಿಕೆಗೆ ಏಕೆ ಆಕ್ಷೇಪಿಸುತ್ತಿದ್ದಾರೆ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಪ್ರಶ್ನಿಸಿದರು.  ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಜನರಿಗೆ ಆಮಿಷ ಒಡ್ಡಲಾಗಿದೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರು ಹೈಕೋರ್ಟ್‌ನಲ್ಲಿ ಅರ್ಜಿ ದಾಖಲಿಸಿರುವ ಬಗ್ಗೆ ಶನಿವಾರ ಸುದ್ದಿಗಾರರಿಗೆ ಈ ಪ್ರತಿಕ್ರಿಯೆ ನೀಡಿದರು.  ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯುವಕರು, ಮಹಿಳೆಯರು ಹಾಗೂ ರೈತರಿಗೆ ನೆರವು ನೀಡಲಿದೆ ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿತ್ತು. ನಾನು ಚುನಾವಣಾ ಸಂದರ್ಭದಲ್ಲಿ ಅದನ್ನೇ ಹೇಳಿದ್ದೆ ಎಂದು ತಿಳಿಸಿದರು.  ಈ ವಿಷಯದ ಬಗ್ಗೆ ಹೈಕೋರ್ಟ್‌ನಿಂದ ಇನ್ನೂ ಯಾವುದೇ ನೋಟಿಸ್ ಬಂದಿಲ್ಲ. ಹೀಗಾಗಿ ಪ್ರಕರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಇಷ್ಟಪಡುವುದಿಲ್ಲ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net