ಅಘೋಷಿತ ತುರ್ತು ಪರಿಸ್ಥಿತಿ ಅಪಾಯಕಾರಿ

dvg-D.-Basavaraj-26.jpg
Published on

ದಾವಣಗೆರೆ : ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಕಾಲದ ಘೋಷಿತ ತುರ್ತು ಪರಿಸ್ಥಿತಿಗಿಂತ ಈಗಿನ ಪ್ರಧಾನಿ ನರೇಂದ್ರ ಮೋದಿ ಅವರ ಅಘೋಷಿತ ತುರ್ತು ಪರಿಸ್ಥಿತಿ ಅಪಾಯಕಾರಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ಹೇಳಿದ್ದಾರೆ.

ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿಯನ್ನು ಅಧಿಕೃತವಾಗಿ ಜೂನ್ 1975ರ ಜೂನ್ 25 ರಂದು ಜಾರಿಗೆ ತಂದು 1977ರ ಮಾರ್ಚ್ 21 ಕ್ಕೆ ಮುಕ್ತಾಯ ಗೊಳಿಸಿದರು. ಇದರಿಂದ ಅವರ ರಾಜಕೀಯ ವಿರೋಧಿಗಳಿಗೆ ಸ್ವಲ್ಪ ತೊಂದರೆಯಾಯಿತು. ಆದರೆ ದೇಶದ ಜನಸಾಮಾನ್ಯರಿಗೆ ಯಾವುದೇ ಸಮಸ್ಯೆ ಆಗಲಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಘೋಷಿಸಿದ ಕಾರಣಕ್ಕೆ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡು ಬೆಲೆ ತೆತ್ತರು. ಆದರೆ 2014 ರಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net