

ದಾವಣಗೆರೆ : ಲೋಡ್ ಶೆಡ್ಡಿಂಗ್ ನೆಪದಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡದಿರುವುದನ್ನು ವಿರೋಧಿಸಿ ಗುರುವಾರ ಆನಗೋಡು ಬೆಸ್ಕಾಂ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ತಾಲೂಕು ಅಧ್ಯಕ್ಷ ಮಂಡ್ಲೂರು ವಿಶ್ವನಾಥ್ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆನಗೋಡು ಬೆಸ್ಕಾಂ ವ್ಯಾಪ್ತಿಯಲ್ಲಿ ಕೃಷಿ ಪಂಪ್‌ಸೆಟ್ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಅಧಿಕಾರಿಗಳನ್ನು ಕೇಳಿದರೆ ಲೋಡ್ ಶೆಡ್ಡಿಂಗ್ ನೆಪ ಹೇಳುತ್ತಾರೆ ಎಂದು ದೂರಿದರು.
ಕಳಪೆ ಗುಣಮಟ್ಟದ ವಿದ್ಯುತ್ ಪೂರೈಕೆ ಕಾರಣದಿಂದ ಪ್ರತಿ ದಿನ ಐದಾರು ಬಾರಿ ಲೋಡ್ ಶೆಡ್ಡಿಂಗ್‌ನಿಂದ ಪಂಪ್‌ಸೆಟ್ ಸುಟ್ಟು ಹೋಗುತ್ತಿವೆ. ಈ ಬಗ್ಗೆ ಅನೇಕ ಬಾರಿ ಗಮನಕ್ಕೆ ತಂದರೂ ಉದಾಸೀನ ಮಾಡಲಾಗುತ್ತಿದೆ ಎಂದು ದೂರಿದರು.
ಸಂಘದ ಎಸ್.ಜಿ. ರಮೇಶ್, ಎನ್.ವಿ. ನಾಗರಾಜಪ್ಪ, ಶಿವಕುಮಾರ್, ಸಿದ್ದಪ್ಪ, ಎಂ. ನವೀನ್, ಸಿದ್ದಲಿಂಗಪ್ಪ ಇದ್ದರು.