ಬೆಳೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

farmer.jpg
Published on

ದಾವಣಗೆರೆ : ರೈತರಿಗೆ ಬೆಳೆ ಪರಿಹಾರ ನೀಡುವುದು ಸೇರಿ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ರೈತರು ಪ್ರತಿಭಟನೆ ನಡೆಸಿದರು.
 ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ರೈತರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
 ಸರ್ಕಾರ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದು ರೈತರಿಗೆ ಎಕರೆಗೆ 25 ಸಾವಿರ ರೂ. ಬೆಳೆ ಪರಿಹಾರ ಘೋಷಿಸಬೇಕು, ಜನ-ಜಾನುವಾರುಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು, ಮಾತು ಕೊಟ್ಟಂತೆ ಭದ್ರಾ ಡ್ಯಾಂನಿಂದ 100 ದಿನ ನೀರು ಹರಿಸಿ ಭತ್ತದ ಬೆಳೆಗಾರರನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು.
 ಕೃಷಿ ಉತ್ಪನ್ನ ಮಾರುಕಟ್ಟೆ ರೈತ ಭವನದ ಕಾಂಪೌಂಡ್‌ನ್ನು ಕೂಡಲೇ ಮರು ಸ್ಥಾಪಿಸಬೇಕು, ನೀರಾವರಿ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ ತಡೆರಹಿತ 7 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು, ಅಕ್ರಮ-ಸಕ್ರಮ ಅಡಿಯಲ್ಲಿ ಹಣ ಕಟ್ಟಿರುವ ಪಂಪ್‌ಸೆಟ್‌ಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಸುಟ್ಟುಹೋದ ಟಿಸಿಗಳ ಬದಲಿಸಿ ತಕ್ಷಣ ಹೊಸ ಟಿಸಿ ಹಾಕಬೇಕು ಎಂದು ಒತ್ತಾಯಿಸಿದರು.
 ರೈತ ಸಂಘದ ಪದಾಧಿಕಾರಿಗಳಾದ ಹೊನ್ನೂರು ಮುನಿಯಪ್ಪ, ಕೆ.ಜಿ ಶೇಖರಪ್ಪ, ಗೋಶಾಲೆ ಬಸವರಾಜ್, ಕುಮದ್ವತಿ, ಮಾಯಕೊಂಡದ ಬೀರಪ್ಪ, ಮಲ್ಲೇನಹಳ್ಳಿ ನಾಗರಾಜ್, ಮೈದಾಳ ದುರುಗಪ್ಪ, ಮಹಾದೇವಪ್ಪ,  ಮರುಳಸಿದ್ದಯ್ಯ, ಹೊನ್ನೂರು ರಾಜು ಇತರರು ಪ್ರತಿಭಟನೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net