

ದಾವಣಗೆರೆ : ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕಾನೂನು ಕ್ರಮ ಕೈಗೊಂಡು ಅವರನ್ನು ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಮಿತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಪಿ. ಮರುಳಸಿದ್ದಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗೆ ಮನವಿ ರವಾನಿಸಿದರು.
ಒಲಿಂಪಿಕ್ ಪದಕ ವಿಜೇತರು, ವಿಶ್ವ ಚಾಂಪಿಯನ್‌ಗಳು ಸೇರಿ ದೇಶದ ಹೆಮ್ಮೆಯ ಕುಸ್ತಿ ಪಟುಗಳು ದೆಹಲಿಯ ಜಂತರ್-ಮಂತರ್‌ನಲ್ಲಿ ಏಪ್ರಿಲ್‌ನಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸಮಿತಿಯ ಮುಖಂಡರಾದ ಕುರುವ ಗಣೇಶ್, ಹೊನ್ನೂರು ಮುನಿಯಪ್ಪ, ಡಿ.ಕೆ ಭರಮಪ್ಪ, ಮರುಳಸಿದ್ದಯ್ಯ, ಹೊನ್ನೂರು ರಾಜು, ಗೋಶಾಲೆ ಬಸವರಾಜ್, ಕಣಿವೆ ಬಿಳಚಿ ಅಣ್ಣಪ್ಪ, ಕೆ.ವಿ. ರುದ್ರಮುನಿ, ಕೆ.ಜಿ ಶೇಖರಪ್ಪ, ಬೀರಗೊಂಡನಹಳ್ಳಿ ಉಮೇಶ್, ಸಿ.ಪಿ ಕುಮದ್ವತಿ ಇದ್ದರು.
...
Show quoted text