ಸಾರ್ವಜನಿಕ ವಿಜಯದಶಮಿ ಮಹೋತ್ಸವ

IMG-20231016-WA0079.jpg
Published on

ದಾವಣಗೆರೆ : ವಿಶ್ವ ಹಿಂದು ಪರಿಷದ್ ಹಾಗೂ ಸಾರ್ವಜನಿಕ ವಿಜಯದಶಮಿ ಮಹೋತ್ಸವ ಸಮಿತಿಯಿಂದ ನಗರದ ಪಿ.ಬಿ ರಸ್ತೆಯ ಶ್ರೀ ಬೀರಲಿಂಗೇಶ್ವರ ಮೈದಾನದಲ್ಲಿ ಅ.24 ರವರೆಗೆ ಸಾರ್ವಜನಿಕ ವಿಜಯದಶಮಿ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
 ಪರಿಷದ್‌ನಿಂದ ಕಳೆದ 42 ವರ್ಷಗಳಿಂದ ವಿಜಯದಶಮಿ ಮಹೋತ್ಸವ ಆಚರಿಸಿಕೊಂಡು ಬರುತ್ತಿದ್ದು ನಗರದಲ್ಲಿ ಒಂದು ಇತಿಹಾಸ ಸೃಷ್ಟಿಸಿದೆ ಎಂದು ಎಂದು ಸಮಿತಿಯ ಸತೀಶ್ ಪೂಜಾರಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
 ಈಗಾಗಲೇ ಶ್ರೀದೇವಿಯ ಘಟಸ್ಥಾಪನೆ ಮಾಡಲಾಗಿದ್ದು ಪ್ರತಿನಿತ್ಯ ದೇವಿಗೆ ವಿಶೇಷ ಪೂಜೆ ಹಾಗೂ ಅಲಂಕಾರ, ಪ್ರತಿದಿನ ಸಂಜೆ 4.30 ರಿಂದ ರಾಷ್ಟ್ರ ಸೇವಿಕಾ ಸಮಿತಿಯಿಂದ ಲಲಿತಾ ಸಹಸ್ರನಾಮ ಹಾಗೂ ದೇವಿಯ ಭಜನಾ ಪಠಣ ಮತ್ತು ಮಹಿಳಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.
 ಮಹೋತ್ಸವದ ಪ್ರಯುಕ್ತ ಸಮಿತಿ ನೇತೃತ್ವದಲ್ಲಿ ಅ.19 ರ ಬೆಳಗ್ಗೆ 10.30 ರಿಂದ ನಗರದ ರಾಮ್ ಅಂಡ್ ಕೋ ವೃತ್ತದಿಂದ ಸಮಿತಿಯ ನೇತೃತ್ವದಲ್ಲಿ ’ಯುವಕ ಬೈಕ್ ಜಾಥಾ, 20 ರಂದು ಬೆಳಗ್ಗೆ 10.30ಕ್ಕೆ ನಗರದ ರಾಮ್ ಆ್ಯಂಡ್ ಕೋ ವೃತ್ತದಿಂದ ’ಮಹಿಳಾ ಬೈಕ್ ಜಾಥಾ, 21ರ ಬೆಳಗ್ಗೆ 10.30ಕ್ಕೆ ಹೈಸ್ಕೂಲ್ ಮೈದಾನದಿಂದ ’ಅಟೋ ರ‌್ಯಾಲಿ ಹಾಗೂ 23 ರಂದು ಬೆಳಗ್ಗೆ 10 ಗಂಟೆಗೆ ನಗರದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದಿಂದ ’ದುರ್ಗಾದೌಡ್’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
 ಅ. 24ರಂದು 42ನೇ ವರ್ಷದ ಸಾರ್ವಜನಿಕ ವಿಜಯದಶಮಿ ಮಹೋತ್ಸವ ಅಂಗವಾಗಿ ಬೆಳಗ್ಗೆ 11-30ಕ್ಕೆ ನಗರದ ಶ್ರೀ ವೆಂಕಟೇಶ್ವರ ವೃತ್ತದಿಂದ ಶ್ರೀ ಜಡೆಸಿದ್ದ ಶಿವಯೋಗೀಶ್ವರ ಮಠದ ಶ್ರೀ ಶಿವಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ ಬೃಹತ್ ಶೋಭಾಯಾತ್ರೆ ಉದ್ಘಾಟನೆಗೊಳ್ಳಲಿದೆ. ನಗರದ ಪ್ರಮುಖ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net