ಉತ್ಸವದಲ್ಲಿ ವಿನಯ ಕುಮಾರ್ ಭಾಗಿ

dvg-VINAY-KUMAR-18_20240418235653213.jpg
Published on

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ ಕುಮಾರ್, ಹರಿಹರ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಗುರುವಾರ ಶ್ರೀ ಆಂಜನೇಯ ಸ್ವಾಮಿ ರಥೋತ್ಸವ ಹಾಗೂ ಮುಳ್ಳು ಗದ್ದುಗೆ ಉತ್ಸವದಲ್ಲಿ ಭಾಗಿಯಾದರು.
 ಇದೇ ವೇಳೆ ಅವರು ತಮಟೆ ಬಾರಿಸಿ ಸಂತಸ ಹಂಚಿಕೊಂಡರು. ದೇವರನ್ನು ಹೊತ್ತರು. ಗ್ರಾಮಸ್ಥರೊಂದಿಗೆ ನೃತ್ಯ ಮಾಡಿದರು. ಇದೇ ಸಂದರ್ಭದಲ್ಲಿ ವಿನಯ ಕುಮಾರ್ ಮಾತನಾಡಿ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ವಾಭಿಮಾನಿಯಾಗಿ ಕಣಕ್ಕಿಳಿದಿದ್ದೇನೆ. ಜಿಲ್ಲೆಯ ಅಭಿವೃದ್ಧಿಗೆ ನನ್ನದೇ ಆದ ಕನಸುಗಳಿವೆ. ಜನಾಭಿಪ್ರಾಯಕ್ಕೆ ಮನ್ನಣೆ ಕೊಟ್ಟು ಪಕ್ಷೇತರನಾಗಿ ಕಣಕ್ಕಿಳಿದಿದ್ದೇನೆ. ಹಿಂದೆ ಸರಿಯುವ ಪ್ರಶ್ನೆಯೆ ಇಲ್ಲ ಎಂದು ಸ್ಪಷ್ಟಪಡಿಸಿದರು.
 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net