ಪಟಾಕಿ ವ್ಯಾಪಾರಸ್ಥರು ಕೋವಿಡ್ ಮಾರ್ಗಸೂಚಿ ಪಾಲಿಸಿ

dvg pataki nov 12
Published on

ದಾವಣಗೆರೆ: ಕೋವಿಡ್ ಮಾರ್ಗಸೂಚಿ ಅನುಸರಿಸಿ ಪಟಾಕಿ ವ್ಯಾಪಾರ ಮಾಡುವಂತೆ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹೇಳಿದರು.

ಪಟಾಕಿ ವರ್ತಕರ ಮತ್ತು ಬಳಕೆದಾರರ ಸಂಘದಿಂದ ನಗರದ ಹೈಸ್ಕೂಲ್ ಮೈದಾನದಲ್ಲಿ ಗುರುವಾರ ಪಟಾಕಿ ಮಾರಾಟ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದರು.

ಪಟಾಕಿ ಮಾರಾಟಗಾರರು ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಉಪಯೋಗಿಸಿ, ಎಚ್ಚರಿಕೆಯಿಂದ ವ್ಯಾಪಾರ ಮಾಡಬೇಕು ಎಂದು ತಿಳಿಸಿದರು.

ಕರೊನಾ ಹಿನ್ನೆಲೆಯಲ್ಲಿ ಎಲ್ಲ ಕ್ಷೇತ್ರಗಳ ವ್ಯಾಪಾರ ಕಡಿಮೆಯಾಗಿದೆ. ಇಂಥ ಪರಿಸ್ಥಿತಿಯಲ್ಲಿ ಪಟಾಕಿ ಮಾರಾಟ ಮಾಡುತ್ತಿದ್ದೀರಿ, ಒಳ್ಳೆಯ ವ್ಯಾಪಾರವಾಗಲಿ ಎಂದು ಆಶಿಸಿದರು.

ಉಪ ಪರಿಸರ ಅಧಿಕಾರಿ ಸಂತೋಷ್ ಮಾತನಾಡಿ, ಹಸಿರು ಪಟಾಕಿ ಬಳಸುವುದರಿಂದ ಶಬ್ದ ಹಾಗೂ ವಾಯು ಮಾಲಿನ್ಯ ಕಡಿಮೆಯಾಗುತ್ತದೆ. ಕೋವಿಡ್ ಮಾರ್ಗಸೂಚಿ ಅನುಸರಿಸಿ ಎಂದು ಹೇಳಿದರು.

ಪಟಾಕಿ ವರ್ತಕರ ಹಾಗೂ ಬಳಕೆದಾರರ ಸಂಘದ ಅಧ್ಯಕ್ಷ ಡಿ.ಎಸ್.ಸಿದ್ದಣ್ಣ ಮಾತನಾಡಿ, 6 ವರ್ಷಗಳಿಂದ ಕಾನೂನುಬದ್ಧವಾಗಿ ವ್ಯಾಪಾರ ಮಾಡುತ್ತ ಬಂದಿದ್ದೇವೆ. ಈ ಬಾರಿ ಕರೊನಾ ಇರುವುದರಿಂದ ನಮ್ಮ ಸಂಘದಿಂದ ಪಟಾಕಿ ವ್ಯಾಪಾರಸ್ಥರಿಗೆ ಸ್ಯಾನಿಟೈಸರ್, ಮಾಸ್ಕ್ ನೀಡಿದ್ದೇವೆಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ವೀರೇಶ್, ಶಿವಾನಂದ್, ಸಾಗರ್ ಇದ್ದರು. ಹೈಸ್ಕೂಲ್ ಮೈದಾನದಲ್ಲಿ ಪಟಾಕಿ ಮಾರಾಟದ 46 ಮಳಿಗೆಗಳನ್ನು ಹಾಕಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net