ಪ್ರವಾಹ ಪರಿಸ್ಥಿತಿ ನಿಭಾಯಿಸಲು ಅಧಿಕಾರಿಗಳಿಗೆ ಸೂಚನೆ

dam_20240728000834589.jpg
Published on

ದಾವಣಗೆರೆ : ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.  ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದ್ದು 84,287 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಭದ್ರಾ ಜಲಾಶಯಕ್ಕೆ 50 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ಒಳಹರಿವಿದೆ. ಜಲಾಶಯ ಭರ್ತಿಯಾಗಲು ಕೇವಲ 8 ಅಡಿ ಬಾಕಿ ಇದೆ.  ಭದ್ರಾ ಜಲಾಶಯದಿಂದ ಯಾವುದೇ ಕ್ಷಣದಲ್ಲಿ 50 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ನದಿಗೆ ಬಿಡುವ ಸಾಧ್ಯತೆಯಿದೆ. ಇದರಿಂದಾಗಿ ಹೊನ್ನಾಳಿ, ನ್ಯಾಮತಿ ಹಾಗೂ ಹರಿಹರ ತಾಲೂಕುಗಳ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net