ಗಾಜಿನ ಮನೆಯಲ್ಲಿ ಫಲಪುಷ್ಪ ಪ್ರದರ್ಶನ

dc-gangadharaswamy-gm_20241227005122316.jpg
Published on

ದಾವಣಗೆರೆ :  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತೋಟಗಾರಿಕೆ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನವನ್ನು ಶನಿವಾರದಿಂದ ಜ. 1ರ ವರೆಗೆ ನಗರದ ಗಾಜಿನ ಮನೆಯಲ್ಲಿ ಆಯೋಜಿಸಲಾಗಿದೆ.  ಶನಿವಾರ ಸಂಜೆ 5 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪ್ರದರ್ಶನ ಉದ್ಘಾಟಿಸುವರು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಂಸದೆ ಡಾ.ಪ್ರಭಾ óಮಲ್ಲಿಕಾರ್ಜುನ್, ಜಿಲ್ಲೆಯ ಶಾಸಕರು, ಮೇಯರ್, ದೂಡಾ ಅಧ್ಯಕ್ಷ ಸೇರಿ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.  ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಡಾ. ಶಮ್ಲ ಇಕ್ಬಾಲ್, ನಿರ್ದೇಶಕ ಡಿ.ಎಸ್. ರಮೇಶ್, ಜಿಲ್ಲಾ ನೋಡಲ್ ಅಧಿಕಾರಿ ಎಂ. ಜಗದೀಶ್, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಎಸ್ಪಿ ಉಮಾ ಪ್ರಶಾಂತ್, ಜಿ.ಪಂ. ಸಿಇಒ ಸುರೇಶ್ ಬಿ. ಇಟ್ನಾಳ್, ತೋಟಗಾರಿಕೆ ಉಪ ನಿರ್ದೇಶಕ ರಾಘವೇಂದ್ರ ಪ್ರಸಾದ್, ಹಿರಿಯ ಸಹಾಯಕ ನಿರ್ದೇಶಕ ವೀರಭದ್ರಸ್ವಾಮಿ ಭಾಗವಹಿಸುವರು.    

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net