ಆರುಷಿ ಯೋಜನೆ ಜಾರಿಗೆ ಆಗ್ರಹ

DVG-JAKKALI.jpg
Published on

ದಾವಣಗೆರೆ: ಹೆಣ್ಣು ಭ್ರೂಣ ಹತ್ಯೆ ನಿಯಂತ್ರಣ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ದೇಶದಲ್ಲಿ ಆರುಷಿ ಯೋಜನೆ ಜಾರಿಗೆ ತರಬೇಕು. ಇದರಿಂದ ಜನಗಣತಿ ಸೇರಿ ಯಾವುದೇ ಸಮೀಕ್ಷೆಗೆ ಅನುಕೂಲವಾಗಲಿದೆ ಎಂದು ಯೋಜನೆ ರೂವಾರಿ ಸಿ.ಎಂ. ಜಕ್ಕಾಳಿ ಹೇಳಿದರು.  ಕೇಂದ್ರ ಸರ್ಕಾರ 2024-25ನೇ ಸಾಲಿನಲ್ಲಿ ಜನಗಣತಿ ನಡೆಸಲು ಸುಮಾರು 14 ಸಾವಿರ ಕೋಟಿ ಹಣ ಮೀಸಲಿಟ್ಟಿದೆ. ಆದರೆ, ಇದರಿಂದ ಜನಗಣತಿ ಮತ್ತು ಲಿಂಗಾನುಪಾತದ ಕುಸಿತ ಮಾತ್ರ ತಿಳಿದುಬರಲಿದ್ದು, ರಾಷ್ಟ್ರೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಆಗುವುದಿಲ್ಲ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.  ಆರುಷಿ ಮೈ ಡಾಟರ್ ಯೋಜನೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 5 ಸಾವಿರ ಜನರಿಗೆ ಒಬ್ಬರಂತೆ ಕಾರ್ಯ ನಿರ್ವಹಿಸುತ್ತಿರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕರಿಗೆ ನೂತನ ತಂತ್ರಜ್ಞಾನ ಹೊಂದಿರುವ ಮಿಷನ್ ನೀಡುವುದು ಹಾಗೂ 140 ಕೋಟಿ ಜನರನ್ನು 2.80 ಲಕ್ಷ ಮಿಷನ್‌ನಲ್ಲಿ ವಿಂಗಡಿಸಿ ದಾಖಲಾತಿ ಮಾಡಿಕೊಳ್ಳಬಹುದು ಎಂದರು.  ಯೋಜನೆ ಜಾರಿಯಿಂದ ಯಾವುದೇ ವೆಚ್ಚವಿಲ್ಲದೆ ರಾಷ್ಟ್ರೀಯ ಸಮೀಕ್ಷೆಗಳನ್ನು ನಡೆಸಬಹುದಾಗಿದ್ದು, ದೇಶದ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ. ಕೇಂದ್ರ ಸರ್ಕಾರಕ್ಕೆ ಯೋಜನೆ ಜಾರಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದ್ದು, ವಿಳಂಬ ಧೋರಣೆ ಅನುಸರಿಸಿದರೆ ರಾಜ್ಯಮಟ್ಟದ ರ‌್ಯಾಲಿ ನಡೆಸಲಾಗುವುದು ಎಂದು ಹೇಳಿದರು.  ಮಂಜಾನಾಯ್ಕ ಸುದ್ದಿಗೋಷ್ಠಿಯಲ್ಲಿದ್ದರು.  

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net