ಆನ್‌ಲೈನ್ ಶಿಕ್ಷಣ ಬೇಡವೇ ಬೇಡ

dvg aisf july 13
Published on

ದಾವಣಗೆರೆ: ರಾಜ್ಯ ಸರ್ಕಾರ, ಉದ್ದೇಶಿತ ಆನ್‌ಲೈನ್ ಶಿಕ್ಷಣ ಜಾರಿ ವಿರೋಧಿಸಿ ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್‌ನ ಜಿಲ್ಲಾ ಮಂಡಳಿ ಸದಸ್ಯರು ಸೋಮವಾರ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಮೂಲಸೌಕರ್ಯಗಳ ಕೊರತೆ ಇದೆ. ಹಿಂದುಳಿದವರ ಮಕ್ಕಳು ಈ ಶಾಲೆಗಳನ್ನು ಅವಲಂಭಿಸಿದ್ದಾರೆ. ಹೀಗಾಗಿ ಅಲ್ಲಿನ ವಾಸ್ತವ ಚಿತ್ರಣ ಗ್ರಹಿಸದೇ ಆನ್‌ಲೈನ್ ಶಿಕ್ಷಣ ಕಡ್ಡಾಯಗೊಳಿಸಲು ಮುಂದಾಗಿರುವುದು ದುರಂತ. ಸರ್ಕಾರ, ಖಾಸಗಿ ಶಿಕ್ಷಣ ಸಂಸ್ಥೆಗಳ ವಕ್ತಾರರಂತೆ ನಿರ್ಧಾರ ಕೈಬಿಡಬೇಕು ಎಂದರು.

ಕೋವಿಡ್ ಸಂದರ್ಭದಲ್ಲಿ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸಬೇಕು. ರಾಜ್ಯದ ಎಲ್ಲ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ರಾಷ್ಟ್ರೀಕರಣಗೊಳಿಸಬೇಕು. ಒಬಿಸಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಶೇ.25ರಷ್ಟು ಮೀಸಲು ಕಲ್ಪಿಸಬೇಕೆಂದು ಒತ್ತಾಯಿಸಿದರು.

ದಾವಣಗೆರೆ ಜೆಜೆಎಂ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ 16 ತಿಂಗಳ ಬಾಕಿ ವೇತನ ನೀಡಬೇಕೆಂದು ಇದೇ ವೇಳೆ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರಿಗೂ ಪ್ರತ್ಯೇಕ ಮನವಿಪತ್ರ ರವಾನಿಸಿದರು. ಧರಣಿ ಸ್ಥಳದಲ್ಲೂ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು.

ರಾಜ್ಯ ಕಾರ್ಯದರ್ಶಿ ಎಚ್.ರಮೇಶ್‌ನಾಯ್ಕ, ಜಿಲ್ಲಾ ಸಂಚಾಲಕರಾದ ಕೆ. ರಾಕೇಶ್, ಪ್ರದೀಪ್‌ಕುಮಾರ್, ಎಂ.ಚಂದ್ರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net