

ದಾವಣಗೆರೆ : ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಕಾರ್ಯಕ್ರಮದ ಪ್ರಾರಂಭೋತ್ಸವ ಆ. 27 ರಂದು ನಡೆಯಲಿದ್ದು, ಅಂದು 363 ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು. ಜಿಲ್ಲೆಯ 194 ಗ್ರಾ.ಪಂ, ನಗರ ಪ್ರದೇಶದ 169 ಸ್ಥಳಗಳಲ್ಲಿ ಹಮ್ಮಿಕೊಳ್ಳಲಾಗುವುದು.
ಪ್ರಸ್ತುತ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯ 3 ಲಕ್ಷ 15 ಸಾವಿರ ಫಲಾನುಭಾವಿಗಳು ನೋಂದಾಯಿಸಿಕೊಂಡಿದ್ದಾರೆ. ಆ. 27 ರ ವರೆಗೆ 3.50 ಲಕ್ಷ ಫಲಾನುಭವಿಗಳ ನೋಂದಣಿಗೆ ಯೋಜಿಸಲಾಗಿದೆ.
ಯೋಜನೆಯ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಗುರುವಾರ ಅಧಿಕಾರಿಗಳ ಸಭೆ ನಡೆಸಿದರು. ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಪಾಲಿಕೆ ಆಯುಕ್ತೆ ರೇಣುಕಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ ಇನ್ನಿತರ ಅಧಿಕಾರಿಗಳು ಇದ್ದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ವಿವಿಧ ಇಲಾಖೆ ಸಚಿವರು ವಿಡಿಯೋ ಸಂವಾದ ನಡೆಸಿ ನಿರ್ದೇಶನ ನೀಡಿದಂತೆ ಜಿಲ್ಲೆಯಲ್ಲಿ ಕಾರ್ಯಕ್ರ