ಹ್ಯಾಂಡ್‌ಬಾಲ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

dvg-sports-28.jpg
Published on

ದಾವಣಗೆರೆ : ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಇತ್ತೀಚೆಗೆ ಆಯೋಜಿಸಿದ್ದ 2023-24ನೇ ಸಾಲಿನ ರಾಜ್ಯಮಟ್ಟದ ಕ್ರೀಡಾಕೂಟದ ಹ್ಯಾಂಡ್‌ಬಾಲ್ ಸ್ಪರ್ಧೆಯಲ್ಲಿ ನಗರದ ಶ್ರೀಮತಿ ಪುಷ್ಪ ಶಾಮನೂರು ಮಹಾಲಿಂಗಪ್ಪ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದಾನೇಶ್ವರಿ ಸೊಪ್ಪಿನ ಮಠ ವಿಜೇತರಾಗಿದ್ದು, ಮುಂದಿನ ವಾರ ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಬಾಲಕಿಯರ ಹ್ಯಾಂಡ್‌ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
 ರಾಷ್ಟ್ರಮಟ್ಟಕ್ಕೆ ಜಿಲ್ಲೆಯಿಂದ ಆಯ್ಕೆಯಾದ ಇಬ್ಬರು ವಿದ್ಯಾರ್ಥಿಗಳ ಪೈಕಿ ದಾನೇಶ್ವರಿ ಒಬ್ಬರಾಗಿದ್ದಾರೆ. ಇದೇ ಕಾಲೇಜಿನ ವಿದ್ಯಾರ್ಥಿನಿಯರಾದ ಚೈತ್ರಾ ಹುಲ್ಲತ್ತಿ ಮತ್ತು ಅಪೂರ್ವಾ ತರೀಕೆರೆ ಅವರೂ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ್ ತರಬೇತಿ ನೀಡಿದ್ದಾರೆ. ತಮ್ಮ ವಿದ್ಯಾರ್ಥಿನಿಯರ ಸಾಧನೆಯ ಬಗ್ಗೆ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.
 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net