ಸೌಲಭ್ಯ ಪಡೆದು ಸಬಲರಾಗಲು ಸಲಹೆ

byke.jpg
Published on

ದಾವಣಗೆರೆ : ಅಂಗವಿಕಲ ಫಲಾನುಭವಿಗಳು ಸರ್ಕಾರದಿಂದ ನೀಡಿರುವ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ದುಡಿಮೆಗೆ ಬಳಸಿಕೊಂಡು ಸಬಲರಾಗುವಂತೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.
 ಜಿಲ್ಲಾ ಸಚಿವರ ಗೃಹ ಕಚೇರಿಯ ಆವರಣದಲ್ಲಿ ಶನಿವಾರ, ಅಂಗವಿಕಲ ಫಲಾನುಭವಿಗಳಿಗೆ ದ್ವಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2022-23ನೇ ಸಾಲಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ 10 ಫಲಾನುಭವಿಗಳನ್ನು ಆಯ್ಕೆ ಮಾಡಿದ್ದು, ಅರ್ಹರಿಗೆ ವಾಹನಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
 ಡಾ. ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, ಅಂಗವಿಕಲರು ಸರ್ಕಾರದ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿ ಜೀವನ ನಡೆಸುವಂತೆ ತಿಳಿಸಿದರು. ಇಲಾಖೆಯ ಅಧಿಕಾರಿ ಡಾ.ಪ್ರಕಾಶ್ ಅಡಿಗ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net