ಅಂಗವಿಕಲರಲ್ಲಿದೆ ವಿಶೇಷ ಶಕ್ತಿ, ಸಾಮರ್ಥ್ಯ

handicap.jpg
Published on

ದಾವಣಗೆರೆ : ಅಂಗವಿಕಲರು ಎಂದರೆ ಅಸಮರ್ಥರು ಎಂಬ ತಪ್ಪು ಭ್ರಮೆ ಬೇಡ. ಅವರಲ್ಲಿಯೂ ವಿಶೇಷ ಸಾಮರ್ಥ್ಯ ಇರುತ್ತದೆ. ನಿರಂತರ ಶ್ರಮದಿಂದ ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು.
 ಮಾಯಕೊಂಡ ವಿಧಾನಸಭಾ ಕ್ಷೇತ್ರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಮಂಗಳವಾರ 20 ಅಂಗವಿಕಲ ಫಲಾನುಭವಿಗಳಿಗೆ ಯಂತ್ರಚಾಲಿತ ತ್ರಿಚಕ್ರ ವಾಹನ ವಿತರಿಸಿ ಮಾತನಾಡಿದರು.
 ಅಂಗವಿಕಲರ ಸರ್ವಾಂಗೀಣ ಬೆಳವಣಿಗೆಗೆ ಸರ್ಕಾರ ಹಲವಾರು ಯೋಜನೆಗಳ ಮೂಲಕ ಸೌಲಭ್ಯ ಕಲ್ಪಿಸಿದೆ. ಎಲ್ಲರಂತೆ ಜೀವನ ನಡೆಸಬೇಕು ಎಂಬ ಉದ್ದೇಶದಿಂದ ವಿಶೇಷ ವಾಹನ ನೀಡಲಾಗಿದೆ. ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
 ಇತ್ತೀಚಿನ ದಿನಗಳಲ್ಲಿ ಸರ್ಕಾರ ಕೊಡುತ್ತಿರುವ ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಇದು ಸರಿಯಲ್ಲ ಎಂದರು.
 ಜಿಲ್ಲಾ ವಿಕಲಚೇತನರ ಕಲ್ಯಾಣಧಿಕಾರಿ ಡಾ. ಕೆ.ಕೆ. ಪ್ರಕಾಶ್, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಕತ್ತಲಗೆರೆ ಡಿ. ತಿಪ್ಪಣ್ಣ, ತೋಳಹುಣಸೆ ಶೇಖರಪ್ಪ, ಯುವ ಕಾಂಗ್ರೆಸ್ ಮುಖಂಡ ಅಣಬೇರು ಜಾಫರ್ ಶರೀಫ್, ಈಚಘಟ್ಟ ಶಿವಣ್ಣ, ಶಾಸಕರ ಪಿಎ ಹನುಮಂತಪ್ಪ ಹಾಗೂ ಇಲಾಖೆ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net