

ದಾವಣಗೆರೆ : ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ನಗರದಲ್ಲಿ ಬುಧವಾರ ಹೆಲ್ಮೆಟ್ ಜಾಗೃತಿ ಹಾಗೂ ಸಂಚಾರ ನಿಯಮಗಳ ಪಾಲನೆ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಹಸಿರು ನಿಶಾನೆ ತೋರುವ ಮೂಲಕ ಜಾಥಾಗೆ ಚಾಲನೆ ನೀಡಿದರು. ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭವಾದ ಬೈಕ್ ಜಾಥಾ, ಕ್ಲಾಕ್ ಟವರ್ ವೃತ್ತ, ಶಾರದಾಂಬಾ ವೃತ್ತ, ಗುಂಡಿ ಸರ್ಕಲ್, ವಿದ್ಯಾರ್ಥಿ ಭವನ್, ಅಂಬೇಡ್ಕರ್ ವೃತ್ತ, ಜಯದೇವ ವೃತ್ತ, ಅರಸು ವೃತ್ತ, ಅರುಣಾ ವೃತ್ತದ ಮೂಲಕ ಸಾಗಿ ಡಿಎಆರ್ ಕವಾಯತು ಮೈದಾನದ ಆವರಣದಲ್ಲಿ ಮುಕ್ತಾಯವಾಯಿತು. ಹೆಚ್ಚುವರಿ ಎಸ್ಪಿಗಳಾದ ವಿಜಯ ಕುಮಾರ್ ಎಂ. ಸಂತೋಷ, ಜಿ. ಮಂಜುನಾಥ, ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ, ಪಿ.ಬಿ. ಪ್ರಕಾಶ್ ಇನ್ನಿತರ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.