ಹೆಲ್ಮೆಟ್ ಕಡ್ಡಾಯ ಹಿನ್ನೆಲೆ ಸಮಾಲೋಚನೆ ಸಭೆ

Dinesh-k.-shetty.jpg
Published on

ದಾವಣಗೆರೆ  : ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯ ಮಾಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರೊಂದಿಗೆ ಸಮಾಲೋಚನಾ ಸಭೆಯನ್ನು ಗುರುವಾರ ಸಂಜೆ 5 ಗಂಟೆಗೆ ನಗರದ ಹೈಸ್ಕೂಲ್ ಮೈದಾನದಲ್ಲಿರುವ ಬಾಸ್ಕೆಟ್‌ಬಾಲ್ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.  ಈ ಬೇಸಿಗೆ ಕಾಲದಲ್ಲಿ ಹೆಲ್ಮೆಟ್ ಹಾಕುವುದರಿಂದ ವಾಹನ ಚಾಲಕರಿಗೆ ಬಹಳ ತೊಂದರೆಯಾಗುತ್ತಿದೆ. ಹೆಲ್ಮೆಟ್ ಕಡ್ಡಾಯ ನಿಯಮವನ್ನು ಮಳೆಗಾಲದ ತನಕ ಮುಂದೂಡಬೇಕೆಂದು ಮನವಿ ಪತ್ರ ಕೊಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು ಎಂದು ಅವರು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net