

ದಾವಣಗೆರೆ : ನಗರದ ಜಿಎಂ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 8 ಗಂಟೆಗೆ ಜಿಎಂಯು ಆವರಣದ ಆ್ಯಂಪಿಥಿಯೇಟರ್‌ನಲ್ಲಿ ಸಮಾರಂಭ ಆಯೋಜಿಸಲಾಗಿದೆ. ಮುಖ್ಯ ಅತಿಥಿಗಳಾಗಿ ಜಿಎಂ ವಿಶ್ವವಿದ್ಯಾಲಯದ ಕುಲಾಧಿಪತಿ ಜಿ.ಎಂ. ಲಿಂಗರಾಜು ಆಗಮಿಸುವರು. ಗೌರವ ಅತಿಥಿಗಳಾಗಿ ಸಹ ಕುಲಪತಿ ಡಾ. ಎಚ್.ಡಿ. ಮಹೇಶಪ್ಪ ಭಾಗವಹಿಸುವರು. ಜಿಎಂಯು ಕುಲಪತಿ ಡಾ. ಎಸ್.ಆರ್. ಶಂಕಪಾಲ್, ಕುಲಸಚಿವ ಡಾ. ಬಿ.ಎಸ್. ಸುನೀಲ್ ಕುಮಾರ್, ಆಡಳಿತಾಧಿಕಾರಿ ವೈ.ಯು. ಸುಭಾಷ್ ಚಂದ್ರ, ಜಿಎಂಎಸ್ ಅಕಾಡೆಮಿಯ ಎಎಒ ಜಿ.ಜೆ. ಶಿವಕುಮಾರ್ ಸೇರಿ ಜಿಎಂ ಶೈಕ್ಷಣಿಕ ಸಮೂಹ ಸಂಸ್ಥೆಗಳ ಪ್ರಾಚಾರ್ಯರು, ಡೀನ್‌ಗಳು, ನಿರ್ದೇಶಕರು, ಮುಖ್ಯಸ್ಥರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವರ್ಗದವರು ಪಾಲ್ಗೊಳ್ಳುವರು.