ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ

SS-Mallikarjun-dvg-south.jpg
Published on

ದಾವಣಗೆರೆ : ಜಿಲ್ಲಾಡಳಿತದಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆ.15 ರಂದು ಬೆಳಗ್ಗೆ 9 ಗಂಟೆಗೆ ಸ್ವಾತಂತ್ರ್ಯ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
 ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸುವರು.
 ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಪಾಲಿಕೆ ಮೇಯರ್ ಬಿ.ಎಚ್.ವಿನಾಯಕ,  ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
 ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕುವೆಂಪು ಕನ್ನಡ ಭವನದಲ್ಲಿ ಅಂದು ಸಂಜೆ 6 ಗಂಟೆಗೆ  ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net