

ದಾವಣಗೆರೆ : ಜನತೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಎಲ್ಲ ಯೋಜನೆಗಳ ಸದುಪಯೋಗ ಪಡೆದು ಅರ್ಥಿಕವಾಗಿ ಸಬಲರಾಗಬೇಕು ಎಂದು ಸಂಸದ ಡಾ. ಜಿ.ಎಂ. ಸಿದ್ದೇಶ್ವರ ಹೇಳಿದರು.
ಇಲ್ಲಿನ ಭಗತ್‌ಸಿಂಗ್ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.
ಇಲಾಖಾ ಅಧಿಕಾರಿಗಳು ಸವಲತ್ತುಗಳ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವ ಜತೆಗೆ ಯೋಜನೆಯಿಂದ ಹೊರಗಿರುವ ಜನರನ್ನು ಯೋಜನಾ ವ್ಯಾಪ್ತಿಗೆ ತರುವ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಮಾಜಿ ಶಾಸಕ ಎಸ್.ವಿ. ರಾಮಚಂದ್ರಪ್ಪ, ಪಾಲಿಕೆ ಉಪ ಮೇಯರ್ ಯಶೋದಾ ಯಗ್ಗಪ್ಪ, ಸದಸ್ಯ ಜೆ.ಎನ್. ಶ್ರೀನಿವಾಸ್, ಸುರೇಶ್ ಗಂಡುಗಾಳೆ, ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿ ಬಸವರಾಜಯ್ಯ ಹಾಗೂ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಕಾಶ್ ಇತರರು ಇದ್ದರು.