ಶ್ರಮಿಕರ ಬದುಕು ಬದಲಾಯಿಸುವೆ

VINAYAKUMAR-B.G-1.jpg
Published on

ದಾವಣಗೆರೆ : ಗ್ಯಾರೇಜ್, ವರ್ಕ್‌ಶಾಪ್ ಕೆಲಸ ಮಾಡುವವರ ಪರಿಸ್ಥಿತಿ ಚೆನ್ನಾಗಿ ಅರಿತಿದ್ದೇನೆ. ನಿಮ್ಮ ಬದುಕು ಬದಲಾಯಿಸಲು ಶ್ರಮಿಸುತ್ತೇನೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್ ಕುಮಾರ್ ಹೇಳಿದರು.
 ಜಿಲ್ಲಾ ಗ್ಯಾರೇಜ್, ವರ್ಕ್‌ಶಾಪ್ ಮಾಲೀಕರು ಮತ್ತು ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಮಾಲೋಚನಾ ಸಭೆಯಲ್ಲಿ ಮತಯಾಚನೆ ಮಾಡಿದರು.
 ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು. ಭವಿಷ್ಯದಲ್ಲಿ ಐಎಎಸ್, ಐಪಿಎಸ್‌ನಂಥ ಹುದ್ದೆಗಳಿಗೆ ಹೋಗಬೇಕು. ಉತ್ತಮ ಶಿಕ್ಷಣ ನೀಡುವ ಜವಾಬ್ದಾರಿ ನನಗೆ ಬಿಡಿ. ನಿಮ್ಮ ಸಮಸ್ಯೆಗಳಿಗೆ ನಾನು ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರು.
 ಇದೇ ವೇಳೆ ವಿನಯ್ ಕುಮಾರ್ ಅವರನ್ನು ಗೌರವಿಸಲಾಯಿತು. ಫಾರೂಖ್, ನಾಗರಾಜ್, ಸೈಯದ್ ಯೂಸುಫ್, ಸೈಯದ್ ತೌಫಿಕ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net