15 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ

dvg-job-fare.jpg
Published on

ದಾವಣಗೆರೆ :  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ನಗರದ ಹದಡಿ ರಸ್ತೆಯಲ್ಲಿನ ಸರ್ಕಾರಿ ಐಟಿಐ ಕಾಲೇಜು ಆವರಣದಲ್ಲಿ ಮಾ. 15 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಏರ್ಪಡಿಸಲಾಗಿದೆ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.  ನಗರದ ಗೃಹ ಕಚೇರಿಯಲ್ಲಿ ಮಂಗಳವಾರ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು.  ಎಸ್.ಎಸ್.ಎಲ್.ಸಿ.ಯಿಂದ ಹಿಡಿದು ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್, ವೃತ್ತಿಪರ ಕೋರ್ಸ್‌ಗಳನ್ನು ಪೂರೈಸಿದವರಿಗೆ ವಿವಿಧ ಕಂಪನಿಗಳಿಗೆ ಅಗತ್ಯವಿರುವ 3 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದೆ. ಜಿಲ್ಲೆಯ ಯುವಕ, ಯುವತಿಯರು ಇದರ ಲಾಭ ಪಡೆಯಬೇಕೆಂದು ತಿಳಿಸಿದರು.  ನಗರವು ಜವಳಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆಯುವ ಮೂಲಕ ಮ್ಯಾಂಚೆಸ್ಟರ್ ಎಂದೇ ಹೆಸರು ಗಳಿಸಿತ್ತು. ಈಗ ಶಿಕ್ಷಣ ಕ್ಷೇತ್ರದಲ್ಲಿ ಖ್ಯಾತಿ ಗಳಿಸಿದೆ. ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್, ಮೆಡಿಕಲ್ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಕೃಷಿಯಲ್ಲಿಯೂ ಬಹಳಷ್ಟು ಪ್ರಗತಿಯಾಗಿದೆ ಎಂದು ಹೇಳಿದರು.  ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ರೇಷ್ಮ ಕೌಸರ್, ಕೌಶಲಾಭಿವೃದ್ಧಿ ಅಧಿಕಾರಿ ಶಿವಕುಮಾರ್, ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ, ದಾವಣಗೆರೆ ವಿವಿ ಸಿಂಡಿಕೇಟ್ ಸದಸ್ಯ ಪ್ರಶಾಂತ್ ಹಾಗೂ ವಿವಿಧ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net