

ದಾವಣಗೆರೆ: ನಗರದ ದೇವರಾಜ ಅರಸು ಬಡಾವಣೆಯ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿನ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಆ.24ರಂದು ಮಧ್ಯಾಹ್ನ 2.30ಕ್ಕೆ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ವಕೀಲರ ಸಂಘ ಹಾಗೂ ಆರ್.ಎಲ್. ಕಾನೂನು ಮಹಾವಿದ್ಯಾಲಯ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಕೀಲರ ಸಂಘದ ಕಾರ್ಯದರ್ಶಿ ಎಸ್. ಬಸವರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರು ಕಾರ್ಯಕ್ರಮ ಉದ್ಘಾಟಿಸಿ ಯುವ ವಕೀಲರ ಮುಂದಿರುವ ಸವಾಲುಗಳು ಹಾಗೂ ಸಾಧ್ಯತೆಗಳು ಕುರಿತು ಉಪನ್ಯಾಸ ನೀಡುವರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್.ಹೆಗಡೆ, ಹೈಕೋರ್ಟ್ ವಕೀಲ ಅನಂತ ನಾಯಕ್, ವಕೀಲ ಕೆ.ಎಚ್.ಪಾಟೀಲ್. ಆರ್.ಎಲ್.ಲಾ ಕಾಲೇಜಿನ ಪ್ರಾಚಾರ್ಯ ಡಾ.ಜಿ.ಎಸ್. ಯತೀಶ್ ಅತಿಥಿಗಳಾಗಿ ಪಾಲ್ಗೊಳ್ಳುವರು. ವಕೀಲರ ಸಂಘದ ಜಿಲ್ಲಾಧ್ಯಕ್ಷ ಎಲ್.ಎಚ್.ಅರುಣ್‌ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.