ಆಯತಪ್ಪಿ ಬಿದ್ದ ರುದ್ರಪ್ಪ ಲಮಾಣಿ

DVG_Rudrappa-Lamani.jpg
Published on

ದಾವಣಗೆರೆ : ವಿಧಾನಸಭೆಯ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ನ್ಯಾಮತಿ ತಾಲೂಕು ಸೂರಗೊಂಡನಕೊಪ್ಪದಲ್ಲಿ ಶುಕ್ರವಾರ ರಾತ್ರಿ ಕಬಡ್ಡಿ ಟೂರ್ನಿಗೆ ಚಾಲನೆ ನೀಡುವ ವೇಳೆ ಆಯತಪ್ಪಿ ಬಿದ್ದಿದ್ದು ಅವರಿಗೆ ಯಾವುದೇ ತೊಂದರೆ ಆಗಿಲ್ಲ.  ಸಂತ ಸೇವಾಲಾಲ್ ಜಯಂತ್ಯುತ್ಸವ ಪ್ರಯುಕ್ತ ಕಬಡ್ಡಿ ಟೂರ್ನಿ ಆಯೋಜಿಸಲಾಗಿತ್ತು. ಅದರ ಉದ್ಘಾಟನೆ ಮಾಡುವ ಸಂದರ್ಭದಲ್ಲಿ ಅಲ್ಲಿ ಹಾಕಲಾಗಿದ್ದ ಮ್ಯಾಟ್‌ನಲ್ಲಿ ರುದ್ರಪ್ಪ ಜಾರಿಬಿದ್ದರು. ಕ್ರೀಡಾಪಟುಗಳು ಕೂಡಲೇ ಅವರನ್ನು ಮೇಲಕ್ಕೆತ್ತಿ ಉಪಚರಿಸಿದರು ಎಂದು ಮೂಲಗಳು ತಿಳಿಸಿವೆ.  ರಾತ್ರಿಯೂ ಅವರು ಅಲ್ಲಿಯೇ ತಂಗಿದ್ದರು. ಶನಿವಾರ ಬೆಳಗ್ಗೆ ಭೋಗ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ತಮ್ಮ ಕ್ಷೇತ್ರಕ್ಕೆ ತೆರಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net