

ದಾವಣಗೆರೆ: ನಗರದ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನ.30ರಂದು ದಾಸಶ್ರೇಷ್ಠ ಕನಕದಾಸರ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ ಎಂದು ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಹೇಳಿದರು.
ಜಿಲ್ಲಾಡಳಿತ, ಜಿಪಂ, ದಾಸಶ್ರೇಷ್ಠ ಶ್ರೀ ಕನಕದಾಸರು ಹಾಗೂ ಶ್ರೀ ಸಂಗೊಳ್ಳಿ ರಾಯಣ್ಣ ಜಿಲ್ಲಾ ಹೋರಾಟ ಸಮಿತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನ.30ರ ಬೆಳಗ್ಗೆ 10ಕ್ಕೆ ನಗರದ ಶ್ರೀ ದುರ್ಗಾಂಬಿಕಾ ದೇವಸ್ಥಾನದಿಂದ ಪ್ರಮುಖ ರಸ್ತೆಗಳಲ್ಲಿ ಕನಕದಾಸರ ಕಂಚಿನ ಪುತ್ಥಳಿ ಮೆರವಣಿಗೆ ನಡೆಯಲಿದೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮೆರವಣಿಗೆ ಉದ್ಘಾಟಿಸುವರು, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಸಂಸದ ಜಿ.ಎಂ. ಸಿದ್ದೇಶ್ವರ್ ಅತಿಥಿಗಳಾಗಿ ಭಾಗವಹಿಸುವರು ಎಂದರು.
ಮಧ್ಯಾಹ್ನ 12 ಗಂಟೆಗೆ ವೇದಿಕೆ ಕಾರ್ಯಕ್ರಮವನ್ನು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಉದ್ಘಾಟಿಸುವರು. ಸಮಿತಿ ಅಧ್ಯಕ್ಷ ಪಿ.ಜೆ. ರಮೇಶ್ ಅಧ್ಯಕ್ಷತೆ ವಹಿಸುವರು. ಸಮಾಜದ ಗುರು ಶಿವಕುಮಾರ ಒಡೆಯರ್, ಮಾಜಿ ಶಾಸಕ ಎಸ್.ರಾಮಪ್ಪ, ಜಿಲ್ಲಾ ಕಾಂಗ್ರೆಸ್ ಅದ್ಯಕ್ಷ ಎಚ್.ಬಿ. ಮಂಜಪ್ಪ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಇದೇ ಸಂದರ್ಭದಲ್ಲಿ ಪಾಲಿಕೆ ವಿಪಕ್ಷ ನಾಯಕ ಕೆ. ಪ್ರಸನ್ನಕುಮಾರ್, ಪಾಲಿಕೆ ಸದಸ್ಯ, ಅಂತರಾಷ್ಟ್ರೀಯ ಕ್ರೀಡಾಪಟು ಜೆ.ಎನ್. ಶ್ರೀನಿವಾಸ್, ಕೆ.ಎಚ್. ಅಣ್ಣಪ್ಪ, ಕಾರ್ತಿಕ್ ಸಿ. ಅಗಡಿ ಇತರರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.
ಮುಖಂಡರಾದ ಎಚ್.ಬಿ. ಗೋಣೆಪ್ಪ, ಎಚ್.ಜಿ. ಸಂಗಪ್ಪ, ಜಿ.ಸಿ. ನಿಂಗಪ್ಪ, ಲೋಹಿತ್ ಯರಗಲ್, ಪಾಲಿಕೆ ಸದಸ್ಯ ಜೆ.ಡಿ. ಪ್ರಕಾಶ್, ಎಸ್.ಎಸ್. ಗಿರೀಶ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.