

ದಾವಣಗೆರೆ : ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸುತ್ತಿದ್ದು, ನಗರಕ್ಕೆ ಗುರುವಾರ ಆಗಮಿಸಿದ ರಥವನ್ನು ಆದ್ದೂರಿಯಾಗಿ ಸ್ವಾಗತಿಸಲಾಯಿತು. ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ, ಕನ್ನಡಪರ ಸಂಘಟನೆ, ರೈತ ಕಾರ್ಮಿಕ ಸಂಘಟನೆ ಮುಖಂಡರು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಇದ್ದರು.