

ದಾವಣಗೆರೆ : ಮಧ್ಯ ಕರ್ನಾಟಕದ ದಾವಣಗೆರೆಯು ಭಾಷಾ ಪ್ರೇಮಕ್ಕೆ ಹೆಸರಾದ ಜಿಲ್ಲೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದರು. ನಗರದ ಪ್ರೌಢಶಾಲಾ ಮೈದಾನದಲ್ಲಿ ಬುಧವಾರ, ಅಂತಾರಾಷ್ಟ್ರೀಯ ಕನ್ನಡ ಸಮ್ಮೇಳನ ನಡೆಯಲಿರುವ ಸ್ಥಳದಲ್ಲಿ ಪೆಂಡಾಲ್ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಕನ್ನಡ ನಾಡು, ನುಡಿಯ ಹಿರಿಮೆ, ಗರಿಮೆಯನ್ನು ಹೆಚ್ಚಿಸುವಲ್ಲಿ ದಾವಣಗೆರೆ ಜನರ ಪಾತ್ರ ದೊಡ್ಡದು. ಅಂತಾರಾಷ್ಟ್ರೀಯ ಕನ್ನಡ ಸಮ್ಮೇಳನದ ಯಶಸ್ಸಿಗೆ ದಾವಣಗೆರೆ ಜನರು ಸಂಪೂರ್ಣ ಸಹಕಾರ ನೀಡಲಿದ್ದಾರೆ. ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದಲೂ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಮಾತನಾಡಿ ವಿಶ್ವ ಕನ್ನಡ ಸಮ್ಮೇಳನಕ್ಕೆ ಪೂರ್ವಭಾವಿಯ ರೀತಿಯಲ್ಲಿ ಈ ಸಮ್ಮೇಳನ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಮಾಜಿ ಮೇಯರ್, ಜಿಲ್ಲೆಯ ಶಾಸಕರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಸಹಕಾರ ನೀಡುತ್ತಿದ್ದಾರೆ ಎಂದರು. ಜಿಲ್ಲಾಡಳಿತದ ಸಹಕಾರವನ್ನೂ ನಿರೀಕ್ಷಿಸುತ್ತಿದ್ದೇವೆ. ಸಮ್ಮೇಳನದ ಸವಿ ನೆನಪಿಗಾಗಿ ‘ವಿಶ್ವ ಸಂಕಲ್ಪ’ ಎನ್ನುವ ಸ್ಮರಣ ಸಂಚಿಕೆ ಹೊರಬರಲಿದೆ. ಸಮ್ಮೇಳನ ಯಶಸ್ವಿಯಾಗಿ ನಡೆಯಲು ಸಾರ್ವಜನಿಕರ ಸಹಕಾರ ಮತ್ತು ಪಾಲ್ಗೊಳ್ಳುವಿಕೆಯನ್ನು ಬಯಸುತ್ತೇವೆ ಎಂದು ಹೇಳಿದರು. ಸಮ್ಮೇಳನದ ಆಯೋಜಕ ವಿಶ್ವ ಕನ್ನಡಿಗರ ಟ್ರಸ್ಟ್‌ನ ಮುಖ್ಯಸ್ಥ ಆನಂದಗೌಡರು ಮಾತನಾಡಿ, ಅಂತಾರಾಷ್ಟ್ರೀಯ ಖ್ಯಾತಿಯನ್ನು ಹೊಂದಿರುವ ಸಾಹಿತಿಗಳು, ಕಲಾವಿದರು, ಸಿನಿಮಾ ಕಲಾವಿದರು ಹಾಗೂ ಗಣ್ಯರು ಈ ಸಮ್ಮೇಳನಕ್ಕೆ ಆಗಮಿಸುತ್ತಾರೆ ಎಂದು ತಿಳಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಕೆ. ರಾಘವೇಂದ್ರ ನಾಯರಿ ಮಾತನಾಡಿ, ಆರು ದಿನಗಳ ಕಾಲ ನಡೆಯುವ ಸಮ್ಮೇಳನ ಮತ್ತು ವಸ್ತು ಪ್ರದರ್ಶನವು ಹಲವು ವಿಶೇಷತೆಗಳನ್ನು ಹೊಂದಿದೆ. ಸಾಹಿತ್ಯ, ಶಿಕ್ಷಣ, ಕೃಷಿ, ಉದ್ಯೋಗ ಹಾಗೂ ಯೂಟ್ಯೂಬರ್ಸ್ ಮೇಳ, ಪುಸ್ತಕ ಪ್ರದರ್ಶನ, ವಸ್ತು ಪ್ರದರ್ಶನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಕಲಾವಿದ ಎ. ಮಹಾಲಿಂಗಪ್ಪ, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೆ. ಶಿವಶಂಕರ್, ದಾವಣಗೆರೆ ತಾಲೂಕು ಕಸಾಪ ಅಧ್ಯಕ್ಷೆ ಸುಮತಿ ಜಯಪ್ಪ, ಹರಿಹರ ತಾಲೂಕು ಕಸಾಪ ಅಧ್ಯಕ್ಷ ಡಿ.ಎಂ. ಮಂಜುನಾಥಯ್ಯ, ಜಿಲ್ಲಾ ಮತ್ತು ತಾಲೂಕು ಕಸಾಪ ಪದಾಧಿಕಾರಿಗಳಾದ ಸಿ.ಕೆ. ರುದ್ರಾಕ್ಷಿ ಬಾಯಿ, ಎಸ್.ಎಂ. ಮಲ್ಲಮ್ಮ, ಪರಮೇಶ್ವರಪ್ಪ ದಾಗಿನಕಟ್ಟೆ, ಆರ್. ಶಿವಕುಮಾರ್, ಬೇತೂರು ಷಡಾಕ್ಷರಪ್ಪ, ವಿದುಷಿ ಶೋಭಾ ರಂಗನಾಥ್, ಉಮಾದೇವಿ, ಪರಮೇಶ್ವರಪ್ಪ, ಲಲಿತ್‌ಕುಮಾರ್ ಜೈನ್, ನಾಗಭೂಷಣ, ಶ್ರೀನಿವಾಸ್, ಪಿ. ಜಯರಾಮನ್ ಇದ್ದರು. ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಬಿ. ದಿಳ್ಯಪ್ಪ ಸ್ವಾಗತಿಸಿದರು, ರೇವಣಸಿದ್ದಪ್ಪ ಅಂಗಡಿ ನಿರೂಪಿಸಿದರು. ಸಂಘಟನಾ