30 ರಂದು ಕನ್ನಡ ರಾಜ್ಯೋತ್ಸವ

IMG-20231128-WA0104.jpg
Published on

ದಾವಣಗೆರೆ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ನಗರದ ಕುವೆಂಪು ಕನ್ನಡ ಭವನದಲ್ಲಿ ನ.30 ರಂದು 68ನೇ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಸೇನೆಯ ರಾಜ್ಯ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಎನ್.ಎಸ್. ಸುವರ್ಣಮ್ಮ ತಿಳಿಸಿದರು.
 ಗುರುವಾರ ಬೆಳಗ್ಗೆ 8 ಗಂಟೆಗೆ ನಗರದ ನಿಟುವಳ್ಳಿ ಹೊಸ ಬಡಾವಣೆ ರಿಂಗ್ ರಸ್ತೆಯಿಂದ ಕನ್ನಡ ಭವನದವರೆಗೆ ಬೈಕ್ ರ‌್ಯಾಲಿ ಹಾಗೂ ಸ್ತಬ್ದ ಚಿತ್ರಗಳ ಮೆರವಣಿಗೆ ನಡೆಯಲಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
 ಬೆಳಗ್ಗೆ 11.30 ಕ್ಕೆ ಕರವೇ ಸ್ವಾಭಿಮಾನಿ ಸೇನೆ ರಾಜ್ಯಾಧ್ಯಕ್ಷ ನಿಂಗರಾಜ್‌ಗೌಡ್ರು ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಪಾಲಿಕೆ ಮಹಾಪೌರ ವಿನಾಯಕ ಪೈಲ್ವಾನ್, ಉಪ ಮಹಾಪೌರರಾದ ಯಶೋದಾ ಯಗ್ಗಪ್ಪ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
 ಕಾನೂನು ಅರಿವು ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಉದ್ಘಾಟಿಸುವರು. ನ್ಯಾಯಾಧೀಶರಾದ ಶಿವಪ್ಪ ಗಂಗಪ್ಪ ಸಲಗೆರೆ, ಮಹಾವೀರ ಮ. ಕರೆಣ್ಣನವರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
 ಸೇನೆಯ ಜಿಲ್ಲಾಧ್ಯಕ್ಷ ಬಿ.ಜಯಪ್ರಕಾಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನೀತಾ ನಂದೀಶ್, ರವಿಕುಮಾರ್, ಬಿ.ಆರ್.ಮಂಜುನಾಥ್ ಅಕ್ಬರ್ ಬಾಷಾ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net