

ದಾವಣಗೆರೆ: ಲಾಕ್‌ಡೌನ್ ಉಲ್ಲಂಘಿಸಿ ಭಾನುವಾರದಂದು ಪಾಲಿಕೆ ಕಚೇರಿಯಲ್ಲಿ ಪಾಲಿಕೆ ಸದಸ್ಯರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಂಡ ಆರೋಪದಡಿ ಮೇಯರ್ ಬಿ.ಜಿ.ಅಜಯ್‌ಕುಮಾರ್ ವಿರುದ್ಧ ಒಂದನೇ ಜೆಎಂಎಫ್ ನ್ಯಾಯಾಲಯಕ್ಕೆ ಬಡಾವಣೆ ಠಾಣೆ ಪೊಲೀಸರು ಗುರುವಾರ ವರದಿ ಸಲ್ಲಿಸಿದ್ದಾರೆ.
ತಹಸೀಲ್ದಾರ್ ಬಿ.ಎನ್.ಗಿರೀಶ್ ದೂರು ನೀಡಿದ್ದರ ಹಿನ್ನೆಲೆಯಲ್ಲಿ ಫೋಟೋ, ವೀಡಿಯೋ ಮೊದಲಾದ ಸಾಕ್ಷಾೃಧಾರಗಳನ್ನು ಸಂಗ್ರಹಿಸಿ, ಪರಿಶೀಲಿಸಿದ ಬಳಿಕ ಪೊಲೀಸರು ವರದಿ ನೀಡಿದ್ದಾರೆ. ಇನ್ನೆರಡು ದಿನದಲ್ಲಿ ಕೋರ್ಟ್, ನಿರ್ದೇಶನ ನೀಡುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.