ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಮತದಾನ

DVG-KSB-7.jpg
Published on

ದಾವಣಗೆರೆ : ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಮತದಾರರ ಒಲವು ಹೆಚ್ಚಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವು ಖಚಿತ ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ವಿಶ್ವಾಸ ವ್ಯಕ್ತಪಡಿಸಿದರು.
 ತಾಲೂಕಿನ ಆನಗೋಡು ಸರ್ಕಾರಿ ಶಾಲೆಯ ಮತಗಟ್ಟೆ 60ರಲ್ಲಿ ಮತ ಚಲಾಯಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಪರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅವರ ಗೆಲುವು ನಿಶ್ಚಿತ ಎಂದರು.
 ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ಜನರ ಬೆಂಬಲ ಕಾಂಗ್ರೆಸ್ ಪಕ್ಷದ ಪರವಾಗಿದ್ದು, ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಪಕ್ಷವು ಜಯಗಳಿಸಲಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net