

ದಾವಣಗೆರೆ : ಜು. 21 ಹಾಗೂ 22 ರಂದು ನಗರದ ಶ್ರೀಮದ್ ಅಭಿನವ ರೇಣುಕ ಮಂದಿರಲ್ಲಿ ಹಮ್ಮಿಕೊಂಡಿರುವ ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನದ ಪೂರ್ವಭಾವಿ ಸಭೆ ಶುಕ್ರವಾರ ನಡೆಯಿತು. ನಗರದ ಎಂ.ಬಿ.ಎ ಕಾಲೇಜು ಆವರಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮಾತನಾಡಿ, ವೀರಶೈವ ಲಿಂಗಾಯತ ಸಂಸ್ಕೃತಿ ಸಂವರ್ಧನೆ-ಜಾತಿ ಗಣತಿಯ ನಿರ್ಧಾರಾತ್ಮಕ ನಿಲುವಿಗಾಗಿ, ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಶ್ರಮಿಸಬೇಕು ಎಂದು ಕೋರಿದರು. ಈ ಸಂದರ್ಭದಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಸಮ್ಮೇಳನದ ಆಯೋಜನೆಯ ಪ್ರಮುಖರು, ಸ್ವಾಗತ ಸಮಿತಿಯವರು ಇದ್ದರು.