

ದಾವಣಗೆರೆ : ಹರಿಹರ ತಾಲೂಕು ದೊಗ್ಗಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಾಗಿರುವ ನಗರದ ಕಮಲಾಕ್ಷಿ ಶ್ರೀಕರ್ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾಲು ಉತ್ಪಾದಿಸುತ್ತಿರುವ ಸದಸ್ಯೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಅವರಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಪ್ರಶಸ್ತಿ ಲಭಿಸಿದೆ.
ಒಕ್ಕೂಟದಿಂದ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಕಮಲಾಕ್ಷಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅವರು ಸತತ 2ನೇ ಬಾರಿಗೆ ಈ ಪ್ರಶಸ್ತಿ ಪಡೆದಿದ್ದಾರೆ.