ರಾಜ್ಯದ ಗಣಿ, ಭೂವಿಜ್ಞಾನ ಇಲಾಖೆಗೆ 3ನೇ ಸ್ಥಾನ

dvg-mining-23-1.jpg
Published on

ದಾವಣಗೆರೆ : ಖನಿಜ ಬ್ಲಾಕ್‌ಗಳ ಹರಾಜಿನಲ್ಲಿ ರಾಜ್ಯದ ಗಣಿ ಮತ್ತು ಭೂವಿಜ್ಞಾನ ಇಲಾಖೆಯು 2022-23ನೇ ಸಾಲಿಗೆ 3ನೇ ಸ್ಥಾನ ಪಡೆದುಕೊಂಡಿದೆ.
 ಮಧ್ಯಪ್ರದೇಶದ ಭೂಪಾಲ್‌ನಲ್ಲಿ ಮಂಗಳವಾರ ನಡೆದ ರಾಜ್ಯ ಗಣಿಗಾರಿಕೆ ಮಂತ್ರಿಗಳ 2ನೇ ಸಮ್ಮೇಳನದಲ್ಲಿ ರಾಜ್ಯದ ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪ್ರಶಸ್ತಿ ಸ್ವೀಕರಿಸಿದರು.
 ಈ ಸಂದರ್ಭದಲ್ಲಿ ಅವರು ಮಾತನಾಡಿ, ಭಾರತದಲ್ಲಿ 6ನೇ ಅತಿದೊಡ್ಡ ರಾಜ್ಯವಾದ ಕರ್ನಾಟಕವು ವೈವಿಧ್ಯಮಯ ಖನಿಜ ಸಂಪತ್ತನ್ನು ಹೊಂದಿದ್ದು, ಆರ್ಥಿಕ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡುತ್ತಿದೆ ಎಂದು ತಿಳಿಸಿದರು.
 ಕಬ್ಬಿಣದ ಅದಿರು, ಮ್ಯಾಂಗನೀಸ್, ಸುಣ್ಣದ ಕಲ್ಲು, ಡಾಲಮೈಟ್, ಚಿನ್ನ, ಬಾಕ್ಸೈಟ್, ತಾಮ್ರ, ಕ್ರೋಮೈಟ್, ಗ್ರಾನೈಟ್ ಮುಂತಾದ ಪ್ರಮುಖ ಖನಿಜ ಸಂಪನ್ಮೂಲಗಳು ಕರ್ನಾಟಕದಲ್ಲಿವೆ ಎಂದು ಹೇಳಿದರು.
 ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಪರಿಶೋಧನಾ ಚಟುವಟಿಕೆಗಳನ್ನು ಉತ್ತೇಜಿಸಲು ಒತ್ತು ನೀಡಿದ್ದಾರೆ. ಖನಿಜಕ್ಕೆ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ನಮ್ಮ ರಾಜ್ಯದಲ್ಲಿ ವಿಶೇಷವಾಗಿ ಮ್ಯಾಂಗನೀಸ್, ಪ್ಲಾಟಿನಂ ಗ್ರೂಪ್ ಎಲಿಮೆಂಟ್ಸ್, ನಿಕಲ್, ಮೂಲ ಲೋಹಗಳು, ಚಿನ್ನ ಮತ್ತು ಕ್ರಿಟಿಕಲ್‌ನಂತಹ ಖನಿಜಗಳ ಪರಿಶೋಧನೆ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಖಾಸಗಿ ಮತ್ತು ಸರ್ಕಾರಿ ಘಟಕಗಳು ಮುಂದಾಗಬೇಕು ಎಂದರು.
 ಖನಿಜ ಉತ್ಪಾದನೆಯಲ್ಲಿ 2022-23ರಲ್ಲಿ ಕರ್ನಾಟಕವು ಪ್ರಮುಖ ಕೊಡುಗೆ ನೀಡುವ ರಾಜ್ಯಗಳಲ್ಲಿ ಒಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮರ್ಥ ನಾಯಕತ್ವದಲ್ಲಿ ನೀತಿ ಆಯೋಗದ ಈಸ್ ಆಫ್ ಡುಯಿಂಗ್ ಬ್ಯುಸಿನೆಸ್‌ನಲ್ಲಿ ಕರ್ನಾಟಕ ನಂ. 1 ರಾಜ್ಯವಾಗಿದೆ ಎಂದು ತಿಳಿಸಿದರು.
 ರಾಜ್ಯವು ಅನೇಕ ಸ್ಟಾರ್ಟ್‌ಅಪ್‌ಗಳಿಗೆ ಅತ್ಯಂತ ಅನುಕೂಲಕರ ವಾತಾವರಣವನ್ನು ಸೃಷ್ಟಿಸಿದೆ. ಸಂಭಾವ್ಯ ನೈಸರ್ಗಿಕ ಸಂಪನ್ಮೂಲಗಳನ್ನು ಬಳಸಿಕೊಳ್ಳಲು ಕರ್ನಾಟಕದಲ್ಲಿ ಲಭ್ಯವಿರುವ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಲು ಎಲ್ಲ ಉದ್ಯಮ ಪಾಲುದಾರರು ಮತ್ತು ಸರ್ಕಾರಿ ಕಂಪನಿಗಳಿಗೆ ಮನವಿ ಮಾಡಿದರು.
 ಈ ಸಮ್ಮೇಳನವು ಗಣಿಗಾರಿಕೆ ವಲಯಕ್ಕೆ ಸಂಬಂಧಿಸಿದ ಪರಿಶೋಧನೆ, ಸುಸ್ಥಿರ ಅಭ್ಯಾಸಗಳು ಮತ್ತು ಖನಿಜ ನೀತಿಗಳ ಬಗ್ಗೆ ತಿಳಿದುಕೊಳ್ಳಲು ವೇದಿಕೆ ಒದಗಿಸಿರುವುದು ಉತ್ತಮ ಬೆಳವಣಿಗೆ ಎಂದರು.
 ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಇಲಾಖೆಯ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್, ಕರ್ನಾಟಕದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಾರ್ಯಸಾಧನೆ ಬಗ್ಗೆ ಸಂತಸ ವ್ಯಕ್ತಪಡಿಸಿದರು. ರಾಜ್ಯದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕ ಗಿರೀಶ್, ಕೇಂದ್ರ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net