

ದಾವಣಗೆರೆ : ದಾವಣಗೆರೆ ಅಂಚೆ ಅಧೀಕ್ಷಕರ ಕಚೇರಿಯ ನೂತನ ಕಟ್ಟಡಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕೇಂದ್ರದ ರೈಲ್ವೆ ಹಾಗೂ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಹಾಗೂ ಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ನವದೆಹಲಿಯಲ್ಲಿ ಮಂಗಳವಾರ ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದರು.
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚುವರಿ ಬಿ.ಎಸ್.ಎನ್.ಎಲ್. ಮೊಬೈಲ್ ಟವರ್‌ಗಳನ್ನು ಮಂಜೂರು ಮಾಡುವಂತೆಯೂ ಅವರು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.