'ಶಾಸಕ ಬಸವರಾಜು ಶಿವಗಂಗಾ ಮೆಂಟಲ್'

S.S.Mallikarjun-congres.jpg
Published on

ದಾವಣಗೆರೆ :  ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾ ಒಬ್ಬ ಮೆಂಟಲ್ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.  ಜಿಲ್ಲಾ ಉಸ್ತುವಾರಿಯನ್ನು ಬದಲಾಯಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶಾಸಕ ಶಿವಗಂಗಾ ಪತ್ರ ಬರೆದಿರುವ ಕುರಿತು ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.  ‘ಆತನ ಮಾನಸಿಕ ಸ್ಥಿತಿ ಸರಿಯಾಗಿಲ್ಲ. ಅವರ ಅಣ್ಣನಿಗೆ ಸರಿಯಾಗಿ ಮರ್ಯಾದೆ ಕೊಡುವುದನ್ನು ಕಲಿಯಲಿ. ಅವರ ಅಣ್ಣನೇ ಕಾರ್ಪೊರೇಷನ್ ಚುನಾವಣೆಯ ಟಿಕೆಟ್ ಕೊಡಿಸಿ ಗೆಲ್ಲಿಸಿದ್ದು. ಈಗ ಸಹೋದರನಿಗೇ ಬೆಲೆ ಕೊಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.  ಸಚಿವ ಮಲ್ಲಿಕಾರ್ಜುನ್ ಕಾರ್ಯ ವೈಖರಿಯ ಬಗ್ಗೆ ಬಸವರಾಜ ಶಿವಗಂಗಾ ಇತ್ತೀಚೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ‘ಸಚಿವರು ಬಿಜೆಪಿ ಜತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದರು.  ಅಧಿಕಾರಿಗಳ ವರ್ಗಾವಣೆ ಮತ್ತು ರಾಜ್ಯ ಅಪೆಕ್ಸ್ ಬ್ಯಾಂಕಿಗೆ ಜಿಲ್ಲೆಯಿಂದ ನಿರ್ದೇಶಕರನ್ನು ನಾಮನಿರ್ದೇಶನ ಮಾಡುವ ವಿಚಾರದಲ್ಲಿ ಎಸ್ಸೆಸ್ಸೆಂ ತೆಗೆದುಕೊಂಡ ನಿಲುವಿನ ಬಗ್ಗೆ ಪತ್ರದಲ್ಲಿ ಪ್ರಸ್ತಾಪಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net