

ದಾವಣಗೆರೆ : ಕಾರ್ಮಿಕರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಶೀಘ್ರದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು. ನಗರದ ಗೃಹ ಕಚೇರಿಯಲ್ಲಿ ಗುರುವಾರ ಚಿಗಟೇರಿ ಆಸ್ಪತ್ರೆಯ ಹೊರಗುತ್ತಿಗೆ ನೌಕರರು ಹಾಗೂ ಇತರೆ ಕಾರ್ಮಿಕರ ಸಮಸ್ಯೆ ಆಲಿಸಿ ನೊಂದವರಿಗೆ ಅಭಯವನ್ನು ನೀಡಿದರು. ಯಾವುದೇ ಸಮಸ್ಯೆಗಳಿದ್ದರೂ ಸರ್ಕಾರದೊಂದಿಗೆ ಮತ್ತು ಸಂಬಂಧಪಟ್ಟವರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ ಸಚಿವರು ಸಾರ್ವಜನಿಕರ ಕುಂದುಕೊರತೆ ಆಲಿಸಿದರು. ಕಾಂಗ್ರೆಸ್ ಮುಖಂಡರಾದ ಮಾಗಾನಹಳ್ಳಿ ಪರಶುರಾಮ್, ಬೂದಾಳ್ ಬಾಬು, ಮುದೇಗೌಡ್ರು ಗಿರೀಶ್ ಇದ್ದರು.